ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಎಲ್ಲೆಡೆ ಪೊಲೀಸರ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ ಎಲ್ಲಾ ಫ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇಲ್ ಸೇತುವೆಯ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುತ್ತಿರುವುದಾಗಿ ತಿಳಿಸಿದರು.
ಎಂಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಪೊಲೀಸರ ಭದ್ರತೆಯನ್ನು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿಯೋಜಿಸಲಾಗಿದೆ ಎಂದರು.
ಇನ್ನೂ ಬೆಂಗಳೂರಲ್ಲಿ ಡಿಸೆಂಬರ್.31ರಂದು ರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್, ಪಬ್, ಹೋಟೆಲ್ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಆ ನಂತ್ರ ಮುಚ್ಚುವಂತೆ ಸೂಚಿಸಲಾಗಿದೆ ಎಂದರು.
ರಾಜ್ಯಾಧ್ಯಂತ ‘ಇ-ಗ್ರಾಮ ಸ್ವರಾಜ್’ ತಂತ್ರಾಂಶದ ತಾಂತ್ರಿಕ ಸಮಸ್ಯೆ ಕ್ಲಿಯರ್, ಅನುದಾನ ಬಳಕೆಗೆ ಅವಕಾಶ