ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರ ಇಂದು ರಾತ್ರಿ 11ರಿಂದ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಹೊಸ ವರ್ಷಾಚರಣೆ ನಿಮಿತ್ತ ಬೆಂಗಳಊರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್.31ರಂದು ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್ 31 ರಂದು ರಾತ್ರಿ 11 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ (ಕೆಐಎ ವಿಮಾನ ನಿಲ್ದಾಣಕ್ಕೆ ಹೋಗುವ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಹೊರತುಪಡಿಸಿ) ಎಲ್ಲಾ ರೀತಿಯ… pic.twitter.com/bwmi7cWOCy
— DIPR Karnataka (@KarnatakaVarthe) December 30, 2024