ಬೆಂಗಳೂರು : ಇತಿಗೆ ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಅಗ್ನಿ ದುರಂತಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ರಾಜಾಜಿನಗರದ ರಾಜಕುಮಾರ ರಸ್ತೆಯಲ್ಲಿರುವ ಹೋಂಡಾ ಶೋ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಇಡೀ ಶೋರೂಂ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಕೂಡಲೇ ಶೋರೂಮ್ನಲ್ಲಿದ್ದ ಸಿಬ್ಬಂದಿಗಳು ಹೊರಗಡೆ ಓಡಿ ಬಂದಿದ್ದು ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹೋಂಡಾ ಶೋ ರೂಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ರಾಜಾಜಿನಗರದ ರಾಜಕುಮಾರ ರಸ್ತೆಯಲ್ಲಿರುವಂತಹ ಪ್ಲಾನೆಟ್ ಹೋಂಡಾ ಶೋ ರೂಮ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದ ಪ್ಲಾನೆಟ್ ಹೋಂಡಾ ಶೋರೂಮ್ ಇದೀಗ ಹೊತ್ತಿ ಉರಿದಿದೆ. ಒಕಿನೋವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ, ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಇರುವ ಶಂಕೆ ವ್ಯಕ್ತವಾಗಿದೆ.
ಸುಮಾರು 30ಕ್ಕೂ ಹೆಚ್ಚು ಬೈಕ್ ಗಳು ಅಲ್ಲಿ ಇದ್ದವು ಎನ್ನುವ ಮಾಹಿತಿ ದೊರೆತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.ಶೋ ರೂಂ ನಲ್ಲಿ ಕಾಸ್ಟ್ಲಿ ಬೆಲೆ ಉಳ್ಳಂತಹ ವಾಹನಗಗಳಿದ್ದು, ಅಪಾರ ಪ್ರಮಾಣದ ನಷ್ಟ ಆಗಿರುವ ಶಂಕೆ ವ್ಯಕ್ತವಾಗಿದೆ. ರಾಜಾಜಿನಗರ ಪೊಲೀಸ್ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ