ಬೆಂಗಳೂರು : ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಅಗ್ನಿ ದುರಂತ ಪ್ರಕರಣಗಳು ಹೆಚ್ಚುತ್ತಲೆ ಇವೆ. ಎಷ್ಟೇ ಮುಂಜಾಗ್ರತ ಕ್ರಮ ವಹಿಸಿದರು ಕೂಡ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಪರಪ್ಪನ ಅಗ್ರಹಾರದ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಧಗ ಧಗ ಹೊತ್ತಿ ಉರಿದಿದೆ.
ಈ ಒಂದು ಘಟನೆಯಲ್ಲಿ ಸುಮಾರು ಐದು ಎಕರೆ ಪ್ರದೇಶದಲ್ಲಿರುವ ಗೋದಾಮು ಇದಾಗಿದ್ದು, ಘಟನೆಯಲ್ಲಿ ಎರಡು ಟ್ರಾಕ್ಟರ್, ಒಂದು ಟಾಟಾ ಎಸ್ ಮತ್ತು ಬೈಕ್ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡದಿಂದ ಮುಗಿಲೆತ್ತರಕ್ಕೆ ದಟ್ಟವ್ಗೆ ಆವರಿಸಿದ್ದು, ಹೀಗಾಗಿ ಇಡೀ ಏರಿಯಾ ದುರ್ವಾಸನೆಯಿಂದ ಕೂಡಿದೆ. ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
8 ಅಗ್ನಿ ಶಾಮಕ ಠಾಣೆ ಸಿಬ್ಬಂದಿಯಿಂದ ಕಾರ್ಯಾಚರಣೆ
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸುಮಾರು 8 ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ದೌಡಯಿಸಿ ಸತತವಾಗಿ 10 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಬೆಂಕಿ ನಿಯಂತ್ರಣಕ್ಕೆ ಬಂದಿತ್ತು.ಈ ಅಕ್ರಮ ಸ್ಕ್ರಾಪ್ ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಪ್ಲಾಸ್ಟಿಕ್, ರಬ್ಬರ್, ಕೆಮಿಕಲ್ ವಸ್ತುಗಳ ದಾಸ್ತಾನು ಮಾಡಲಾಗಿದೆ. ಜೊತೆಗೆ ಬಾಂಗ್ಲಾ ವಲಸಿಗರ ಅಡ್ಡೆಯಾಗಿರುವ ಇಲ್ಲಿಗೆ ಅಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಹತ್ತಾರು ವರ್ಷಗಳಿಂದ ಆಕ್ರಮ ಸ್ಕ್ರಾಪ್ ಗೋದಾಮು ನಡೆಯುತ್ತಿದೆ.
ಇನ್ನು ಘಟನೆಯಲ್ಲಿ ಎರಡು ಟ್ರಾಕ್ಟರ್, ಒಂದು ಟಾಟಾ ಎಸ್ ಮತ್ತು ಬೈಕ್ ಬೆಂಕಿಗಾಹುತಿಯಾಗಿದೆ. ಸುಮಾರು 100ಕ್ಕೂ ಅಧಿಕ ಮಂದಿ ಬಾಂಗ್ಲಾ ವಲಸಿಗರು ವಾಸವಿದ್ದ ಜಮೀನು ಇದಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆ ಅಕ್ರಮ ಬಾಂಗ್ಲಾ ವಲಸಿಗರನ್ನು ತೆರವು ಮಾಡಿತ್ತು. ಬಳಿಕ ಸದರಿ ಜಮೀನಿನಲ್ಲಿ ಅಕ್ರಮ ಸ್ಕ್ರಾಪ್ ಗೋದಾಮ ನಡೆಸಲಾಗಿತ್ತು. ಸದ್ಯ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಆಗಮಿಸಿದ್ದು, ಘಟನೆ ಕುರಿತಂತೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.