ಬೆಂಗಳೂರು : ಬೆಂಗಳೂರು ಮಹಾನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಹೆಬ್ಬಾಳದ ಗುಡ್ಡದ ಹಳ್ಳಿಯ ಟೈರ್ ಅಂಗಡಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದೆ ಎಂದು ತಿಳಿದುಬಂದಿದೆ.
ಮನೆಯೊಂದರಲ್ಲಿ ಬೆಂಕಿ ಅವಘಡ
ಇದಕ್ಕೂ ಮುಂಚೆ ಬೆಂಗಳೂರಿನ ಇಲ್ಲಿನ ಸಾರಾಯಿಪಾಳ್ಯದ ಮನೆಯೊಂದರಲ್ಲಿ ಗುರುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಮನೆಯೊಂದರಿಂದ ಬೆಂಕಿ ಬರುತ್ತಿರುವುದನ್ನು ಗಮಸಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಕಾರಣ ಹೆಚ್ಚಿನ ಅನಾಹುತ ಆಗುವುದ ತಪ್ಪಿದೆ. ಎರಡು ಮಹಡಿಯ ಮನೆಯ ಮೇಲಿನ ಅಂತಸ್ತಿನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಯು ಮನೆಯಿಂದ ಹೊಸ ಸೂಸಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸುವ ಅವಕಾಶವ ಇಲ್ಲ ಎಂಬುದಾಗಿ ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.