ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡದಿದೆ.
ಬೆಂಗಳೂರಿನ ಮದರ್ ಥೆರೇಸಾ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ದಿಯಾ ಎಂಬ ವಿದ್ಯಾರ್ಥಿನಿ ಹಾಸ್ಟೇಲ್ ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪಶ್ಚಿಮ ಬಂಗಾಳ ಮೂಲದ ದಿಯಾ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.