ಬೆಂಗಳೂರು: ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಇಲಾಖೆ ತಿಳಿಸಿದೆ. ಒಂದೇ ಕುಟುಂಬದಲ್ಲಿಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದಿರುವುದು ಕಾನೂನಿಗೆ ವಿರುದ್ಧವಾಗಿರುತ್ತದೆ. ಆದ್ದರಿಂದ ಒಂದೇ ಕುಟುಂಬದಲ್ಲಿಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಪಡೆದುಕೊಂಡಿರುವುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಾಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸಲು ತಿಳಿಸಿದೆ.