ಬೆಂಗಳೂರು: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಡಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ದಿನಾಂಕವನ್ನು ವಿಸ್ತರಿಸಿದೆ. ಈ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ.
ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ ಎಂದಿದೆ.
BIGG NEWS ; ‘BCCI ಅಧ್ಯಕ್ಷ’ ಸ್ಥಾನ ತೊರೆದ ನಂತ್ರ ‘ಗಂಗೂಲಿ’ ಮೊದಲ ಪ್ರತಿಕ್ರಿಯೆ ; ‘ದಾದಾ’ ಹೇಳಿದ್ದೇನು ಗೊತ್ತಾ?
1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು ರೂ.5.00ಲಕ್ಷಗಳ ಸಹಾಯಧನ
2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್ಟಾಪ್
3. ಅಂಧರಿಗೆ ಸ್ಮಾರ್ಟ್ ಸ್ಟಿಕ್
4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್ಟಾಪ್
5. ಹಿರಿಯ ನಾಗರೀಕರಿಗೆ ಮಡಚುಬಹುದಾದ ವೀಲ್ ಚೇರ್
ಮೇಲ್ಕಂಡ ಯೋಜನೆಗಳಡಿ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-10-2022 ರನ್ನು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ: 31-10-2022 ರವರೆಗೆ ವಿಸ್ತರಿಸಿದೆ. ಈ ಕೆಳಕಂಡ ಕಾರ್ಯಕ್ರಮಗಳಿಗೂ ಸಹಾ ಆನ್ಲೈನ್ ಮುಖಾಂತರ ಸಲ್ಲಿಸಲು ಸಾರ್ವಜನಿಕರ ಗಮನಕ್ಕೆ ತರಲಾಗಿದೆ.
1. ಮಹಿಳಾ ಸ್ವಯಂ ಉದ್ಯೋಗಕ್ಕಾಗಿ ಸಂಚಾರಿ ಉಪಹಾರ ವಾಹನ ಖರೀದಿಸಲು ಆರ್ಥಿಕ ಸಹಾಯಧನ
2. ಉದ್ಯೋಗಸ್ಥ ಮಹಿಳೆಯರಿಗೆ ದ್ವಿಚಕ್ರವಾಹನ ನೀಡುವ ಕಾರ್ಯಕ್ರಮ
ಮೇಲ್ಕಂಡ 02 ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 18.11.2022ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗಧಿಪಡಿಸಲಾಗಿರುತ್ತದೆ.
BREAKING: ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ಲೋಕಾಯುಕ್ತಕ್ಕೆ ಬಿಗ್ ಶಾಕ್: ಹೈಕೋರ್ಟ್ ನೋಟಿಸ್
ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ( Bengaluru One Center ) ರೂ.30/- ಶುಲ್ಕವನ್ನು ಪಾವತಿಸಿ ಆನ್ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.