Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು: BBMPಯಿಂದ ‘ಘನತ್ಯಾಜ್ಯ ನಿರ್ವಹಣೆ’ಗೆ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ
KARNATAKA

ಬೆಂಗಳೂರು: BBMPಯಿಂದ ‘ಘನತ್ಯಾಜ್ಯ ನಿರ್ವಹಣೆ’ಗೆ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ಮುಂಬರುವ ದಸರ ಹಾಗೂ ದೀಪಾವಳಿ ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತು ಮಾರ್ಗಸೂಚಿಯನ್ನು ಬಿಬಿಎಂಪಿಯಿಂದ ಪ್ರಕಟಿಸಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆಂದು ಅಂದಾಜಿಸಲಾಗಿದ್ದು, ಹಬ್ಬದ ದಿನಗಳಂದು ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಈ ಕೆಳಕಂಡಂತೆ ವಿಲೇವಾರಿ ಕ್ರಮಗಳನ್ನು ಅನುಸರಿಸಬೇಕಾಗಿರುತ್ತದೆ.

1. ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಲು ಅರಿವು ಮೂಡಿಸುವುದು.

2. ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಸಾಮಾನುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ನಿಗಾವಹಿಸಲು ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳ ಮತ್ತು ಮಾರ್ಷಲ್‌ಗಳು ತಂಡಗಳನ್ನು ರಚಿಸಿಕೊಂಡು ದಿನಂಪ್ರತಿ ಪರಿವೀಕ್ಷಣೆ ಕೈಗೊಂಡು ಪ್ಲಾಸ್ಟಿಕ್ ಮಾರಾಟ / ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮವಹಿಸುವುದು.

3. ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಅಂದಾಜಿಸಿ. ಸದರಿ ತ್ಯಾಜ್ಯವನ್ನು ಸಂಪೂರ್ಣವಾಗಿ ಸಂಗ್ರಹಿಸಿ, ವಿಲೇವಾರಿ ಮಾಡಲು ಅಗತ್ಯ ಕ್ರಮ ಪಹಿಸುವುದು.

4. ಬ್ಲಾಕ್‌ಸ್ಪಾಟ್‌(ಕಸ ಸುರಿಯುವ ಸ್ಥಳ)ಗಳಲ್ಲಿ ತ್ಯಾಜ್ಯ ಶೇಖರಣೆಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸುವುದು ಹಾಗೂ ಮಾರುಕಟ್ಟೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣವಾಗುವ ಬ್ಲಾಕ್ ಸ್ಪಾಟ್‌ ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮವಹಿಸುವುದು.

5. ಹಬ್ಬದ ಪ್ರಯುಕ್ತ ಮಾರುಕಟ್ಟೆಗಳು ಹಾಗೂ ಇತರೆ ಪ್ರದೇಶಗಳಲ್ಲಿ ಬಾಳೇಕಂದು, ಮಾವಿನ ಎಲೆ, ಹೂವು ಮತ್ತು ಇತರೆ ಹಸಿ ತ್ಯಾಜ್ಯವನ್ನು ಆದ್ಯತೆ ಮೇರೆಗೆ ವಾರ್ಡ್‌ಗಳಲ್ಲಿಯೇ ಹಸಿ / ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಲ್ಪಿಸಿಕೊಂಡು ವಿಲೇವಾರಿ ಮಾಡುವುದು ಅಥವಾ ವಾರ್ಡ್‌ಗಳಲ್ಲಿ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದಲ್ಲಿ ಅಲ್ಲಿಗೆ ವಿಲೇವಾರಿ ಮಾಡುವುದು.

6. ಹಬ್ಬದ ದಿನಗಳಂದು ಉತ್ಪತ್ತಿಯಾಗುವ ಬಾಳೇಕಂದು, ಮಾವಿನ ಎಲೆ ಹಾಗೂ ಇತರೆ ಹಸಿರು ತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಇರುವ ಶೆಡ್ಡರ್ಸ್ ಗಳಿಗೆ ವಿಲೇವಾರಿ ಮಾಡುವುದು.

ಮೇಲಿನ ನಿರ್ದೇಶನಗಳನ್ನು ಕಟ್ಟುನಿಟಾಗಿ ಪಾಲಿಸಿ ದಸರ ಹಾಗೂ ದೀಪಾವಳಿ ಹಬ್ಬದ ದಿನಗಳಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಗಿರಿ ನಾಥ್ ರವರು ಕಛೇರಿ ಆದೇಶದ ಮೂಲಕ ಸೂಚಿಸಿರುತ್ತಾರೆ.

ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಪೋರ್ನ್ ಸ್ಟಾರ್ `ಮಿಯಾ ಖಲೀಫಾ’ ಜೊತೆ ಪಾಕ್ ಮಾಜಿ ಕ್ರಿಕೆಟಿಗನ ವಿಡಿಯೋ ವೈರಲ್ !

BIG NEWS: ‘ಕ್ರೈಂ ಗಣೇಶ್‌’ ಎಂದೇ ಖ್ಯಾತರಾಗಿದ್ದ ‘ಪತ್ರಕರ್ತ ಗಣೇಶ್’ ಇನ್ನಿಲ್ಲ | Crime Ganesh No More

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

2 Mins Read

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

1 Min Read

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

1 Min Read
Recent News

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

BREAKING :ಲುಧಿಯಾನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ : ಮೂವರು ಕಾರ್ಮಿಕರು ಸಾವು, ನಾಲ್ವರ ಸ್ಥಿತಿ ಗಂಭೀರ

State News
KARNATAKA

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

By ಸುರೇಶ್‌ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಬಳಿಯ ತಟ್ಟೆಕೊಡ್ಲುವಿನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. 85 ವರ್ಷದ ವೃದ್ಧರೊಬ್ಬರು ತಮ್ಮದೇ…

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಕಣ್ಣೆದುರೇ ನದಿಯಲ್ಲಿ ನೀರು ಪಾಲಾದ ತಂದೆ!

ಸಾಗರದ ಮಾರಿ ಜಾತ್ರೆ ಅನುದಾನದ ಬಗ್ಗೆ ಸತ್ಯ ಸಾರ್ವಜನಿಕರ ಮುಂದಿದೆ: ಟೌನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.