ಬೆಂಗಳೂರು: ಕೆಂಪೇಗೌಡ ರಸ್ತೆಯಲ್ಲಿ ದಿನೇ ದಿನೇ ವಾಹನಗಳ ಅತಿಯಾದ ವೇಗದಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಈ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಅದೇ ಅತಿ ವೇಗವಾಗಿ ಚಾಲನೆ ಮಾಡೋ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ. ಜೊತೆಗೆ ನಿಗದಿತ ಮತಿಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದ್ರೇ ಕೇಸ್ ಹಾಕೋದು ಫಿಕ್ಸ್ ಆಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಚಾಲಕರು/ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪುಮುಖವಾದ ಪಾತ್ರ ವಹಿಸುತ್ತಿರುವುದನ್ನು ಗಮನಿಸಿಸಲಾಗಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಿದ್ದು, ಸದರಿ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿದ್ದು, ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ‘ಪಾಪಿ ತಂದೆ’
ವಿಜಯಪುರ : ಮೂರು ಮಕ್ಕಳ ಸಾವಿನ ಪ್ರಕರಣ : ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು