ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕಫೆ ಹೋಟೆಲ್ ಒಂದರಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದ್ದು, ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯ ಬಳಿಯಲ್ಲಿನ ರಾಮೇಶ್ವರಂ ಕಫೆ ಹೋಟೆಲ್ ಒಂದರಲ್ಲಿ ನಿಗೂಢವಾಗಿ ಸ್ಪೋಟವೊಂದು ಸಂಭವಿಸಿರುವುದಾಗಿ ತಿಳಿದು ಬಂದಿದೆ.
ನಿಗೂಢ ಸ್ಪೋಟದಿಂದ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರಿನ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಗೂಢವಾಗಿ ಸಂಭವಿಸಿದಂತ ಸ್ಪೋಟದ ವಿಷಯ ತಿಳಿದು, ಸ್ಥಳಕ್ಕೆ ಹೆಚ್ ಎಎಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ತಮಿಳುನಾಡು ‘ಸಿಎಂ ಸ್ಟಾಲಿನ್’ಗೆ ‘ಮ್ಯಾಂಡರಿನ್ ಭಾಷೆ’ಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ‘ಬಿಜೆಪಿ’
‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ