ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 6ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದು, ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿರಾಜ ರೆಡ್ಡಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇದೀಗ ಘಟನಾ ಸ್ಥಳದಲ್ಲಿ NDRF, SDRF ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price