ಬೆಂಗಳೂರು: ಭಾರೀ ಮಳೆಗೆ ಮುನಿರಾಜ ರೆಡ್ಡಿ ಕಟ್ಟಡ ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡವು ಏಳು ಅಂತಸ್ತಿನ ಎತ್ತರವಾಗಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಘಟನೆ ಸಂಬಂಧ ಕಟ್ಟಡದ ಮಾಲೀಕ ಭುವನ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನು ಸೋಲು ಪಾಸ್ವಾನ್ ಎಂದು ಗುರುತಿಸಲಾಗಿದೆ.ಈ ಮೂಲಕ ಇದುವರೆಗೂ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದವು ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿರಾಜ ರೆಡ್ಡಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇದೀಗ ಘಟನಾ ಸ್ಥಳದಲ್ಲಿ NDRF, SDRF ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ.
ಬೆಂಗಳೂರಲ್ಲಿ ಮಳೆಯಿಂದಾಗಿ ಕಟ್ಟಡ ಕುಸಿತವಾಗಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
BIG NEWS: ‘ರಾಯಚೂರು ವಿಮಾನ ನಿಲ್ದಾಣ’ಕ್ಕೆ ಕೇಂದ್ರ ಸರಕಾರದ ಗ್ರೀನ್ ಸಿಗ್ನಲ್: ಸಚಿವ ಎನ್.ಎಸ್ ಬೋಸರಾಜು
ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price