ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತವಾಗಿಲ್ಲ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿದೆ. ಈ ಘಟನೆಗೆ ಕಾರಣರಾದ ಮನೆ ಮಾಲೀಕ, ನಿರ್ಮಾಣ ಗುತ್ತಿಗೆದಾರ, ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೂ ಪ್ರಕರಣ ದಾಖಲಿಸಲಾಗುವುದು. ಸಣ್ಣ ಜಾಗದಲ್ಲಿ ಎತ್ತರದ ಕಟ್ಟಡ ಕಟ್ಟಿದ್ದೇ ಇದಕ್ಕೆ ಕಾರಣ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಸೋಲಿನ ಭೀತಿಗೆ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಕುಮಾರಸ್ವಾಮಿ
ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ ಅವರು ಮುಂದಾಗಿದ್ದರು ಎನ್ನುವ ಬಗ್ಗೆ ಕೇಳಿದಾಗ, “ತಮ್ಮ ಸ್ವಂತ ಕ್ಷೇತ್ರವನ್ನೇ ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ದರಾಗಿದ್ದರು. ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ಅವರು ಎಷ್ಟು ದುರ್ಬಲರಾಗಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ. ಅವರು ಚನ್ನಪಟ್ಟಣವನ್ನು ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವೇ” ಎಂದರು.
“ಪ್ರಿಯಾಂಕ ಗಾಂಧಿ ಅವರು ವಯನಾಡಿನಲ್ಲಿ ನಾಮಪತ್ರ ಸಲ್ಲಿಸುತ್ತಿದ್ದು. ಈ ಕಾರ್ಯಕ್ರಮಕ್ಕೆ ತೆರಳಬೇಕಾಗಿತ್ತು. ಪಕ್ಷ ಸೇರ್ಪಡೆ ಕಾರ್ಯಕ್ರಮ ತುರ್ತಾಗಿ ನಡೆದ ಕಾರಣಕ್ಕೆ ಮುಖ್ಯಮಂತ್ರಿಗಳು ಅಲ್ಲಿ ಭಾಗವಹಿಸುತ್ತಿದ್ದು, ನಾನು ತೆರಳಲಿಲ್ಲ. ಅಲ್ಲದೇ ಬೆಂಗಳೂರು ನಗರದಲ್ಲಿ ಉಂಟಾಗಿರುವ ಮಳೆ ಹಾನಿ ವೀಕ್ಷಣೆಗೆ ಒಂದಷ್ಟು ಕಡೆ ಭೇಟಿ ನೀಡುವ ಕಾರಣಕ್ಕೆ ವಯನಾಡಿಗೆ ತೆರಳುವುದನ್ನು ರದ್ದು ಮಾಡಿದೆ” ಎಂದರು.