ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದೆ.
ಮುದ್ದಿನಪಾಳ್ಯದಲ್ಲಿ ಉದ್ಯಮಿ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಅಸಲಿ ವಿಚಾರ ಬಯಲಾಗಿದೆ. ನಾಗರಬಾವಿ 2 ನೇ ಹಂತದ ನಿವಾಸಿ ಪ್ರದೀಪ್ (42) ಆತ್ನಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪೆಟ್ರೋಲ್ ಬಂಕ್ನಲ್ಲಿ ಸ್ಕೋಡಾ ಕಾರ್ನಲ್ಲಿ ಬಂದು ಬಾಟೆಲ್ ನೀಡಿ ಪೆಟ್ರೋಲ್ ಹಾಕಿಸಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇಲ್ನೋಟಕ್ಕೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಅವರ ಕುಟುಂಬದವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.