ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ನಡೆದಿದ್ದಂತ ಕಾಲ್ತುಳಿತ ದುರಂತದ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿತ್ತು. ಇದೀಗ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿದ್ದು, ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿದೆ.
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಕಾರಣದಿಂಗಾಗಿ ನಿರ್ಲಕ್ಷ್ಯ ತೋರಿದಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಎಎಸ್ಐ ಬಾಲಕೃಷ್ಣ ಹಾಗೂ ಇನ್ಸ್ ಪೆಕ್ಟರ್ ಗಿರೀಶ್ ಅವರನ್ನು ಅಮಾನತುಗೊಳಿಸಲಾಗಿತ್ತು.
ಇದೀಗ ರಾಜ್ಯ ಸರ್ಕಾರವು ದಿಢೀರ್ ಬೆಳವಣಿಗೆ ಎನ್ನುವಂತೆ ಏಕಾಏಕಿ ಯೂಟರ್ನ್ ಹೊಡೆದಿದ್ದು, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಎಎಸ್ಐ ಬಾಲಕೃಷ್ಣ ಹಾಗೂ ಇನ್ಸ್ ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಆದೇಶವನ್ನು ರದ್ದುಗೊಳಿಸಿದೆ.
ಅಂದಹಾಗೇ ಜೂನ್.4, 2025ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಗೆ ಭದ್ರತಾ ಲೋಪದ ಆರೋಪ ಮೇರೆಗೆ ಅಂದಿನ ಬೆಂಗಳೂರು ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ್ ಎ.ಕೆ.ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು.
BREAKING: ನಾನು ಎಲ್ಲಾ ಹೆಣ್ಮಕ್ಕಳ ಪರವಾಗಿ ಬಂದು ದೂರು ನೀಡಿದ್ದೇನೆ: ನಟಿ ರಮ್ಯಾ
ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ: ಕೃಷಿ ಇಲಾಖೆ ಮಾಹಿತಿ