Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಮಳೆ ಸಮಸ್ಯೆಗಾಗಿ ಈ ಸಹಾಯವಾಣಿಗೆ ಕರೆ ಮಾಡಿ, ದೂರು ನೀಡಿ
KARNATAKA

ಬೆಂಗಳೂರು ಜನತೆ ಗಮನಕ್ಕೆ: ಮಳೆ ಸಮಸ್ಯೆಗಾಗಿ ಈ ಸಹಾಯವಾಣಿಗೆ ಕರೆ ಮಾಡಿ, ದೂರು ನೀಡಿ

By kannadanewsnow0916/10/2024 5:16 PM

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಎಲ್ಲೆಲ್ಲೂ ರಸ್ತೆಗಳು ಹೊಂಡಗಳಂತಾಗಿ ಜಲಾವೃತಗೊಂಡಿದ್ದಾವೆ. ಈ ಮಳೆ ಸಮಸ್ಯೆಗಾಗಿ ನಗರದ ಜನರು ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡುವಂತೆ ಮನವಿ ಮಾಡಿದೆ.

ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪರಿಶೀಲನೆ:

ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

* ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಇಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೆ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ.

* 02 ಅಗ್ನಿ ಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು ಹೊರ ಹಾಕಲಾಗುತ್ತಿದೆ.

* ನಿನ್ನೆ ಸಂಜೆ ಸಹಾಯ ಕೇಂದ್ರ(Help Desk) ತೆಗಯಲಾಗಿದ್ದು, ನಿವಾಸಿಗಳಿಗಳಿಗೆ ಕುಡಿಯುವ ನೀರು, ಹಾಲು, ಬ್ರೆಡ್, ಬಿಸ್ಕೆಟ್ ಇನ್ನಿತರೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ.

* ಅಪಾರ್ಟ್ಮೆಂಟ್ ನಿಂದ ನಿವಾಸಿಗಳು ಹೊರ ಬರಲು ಹಾಗೂ ಒಳ ಹೋಗಲು 2 ಟ್ರ್ಯಾಕ್ಟರ್ ಗಳ ವ್ಯವಸ್ಥೆ ಮಾಡಲಾಗಿದೆ.

* ಯಲಹಂಕ ಕೆರೆಗೆ ಎರಡು ಕೋಡಿಗಳಿದ್ದು, ಉತ್ತರ, ದಕ್ಷಿಣದಲ್ಲಿ ಕೋಡಿಗಳು ಬರಲಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಕಡೆಗೆ ಉತ್ತರ ಕೋಡಿ ಬರಲಿದ್ದು, ಅಲ್ಲಿ ನೀರಿನ ಹರಿವನ್ನು ಕಡಿಮೆ ಮಾಡಬೇಕಿದೆ. ಈ ಸಂಬಂಧ ದಕ್ಷಿಣದ ಕೋಡಿಯಲ್ಲಿ ನೀರಿನ‌ ಹರಿವಿನ ಮಟ್ಟ ಹೆಚ್ಚಿಸಿದಾಗ ಉತ್ತರದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಕಡಿಮೆಯಾಗಲಿದೆ. ಆದ್ದರಿಂದ ಕೂಡಲೆ ಸೂಕ್ತ ಕ್ರಮ ಕೈಗೊಳ್ಳ ಸೂಚನೆ ನೀಡಿದರು.

* 20ಕ್ಕೂ ಹೆಚ್ಚು ಅಧಿಕಾರಿ/ಸಿಬ್ಬಂದಿಗಳು ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ಪರಿಶೀಲನೆ:

* ಲೇಔಟ್ ಗೆ ಬರುವತ್ತಿರುವ ನೀರುನ್ನು ತಡೆಯುವ ಸಲುವಾಗಿ ಹಿಂದೆಯೇ ಡೈವರ್ಷನ್ ಚಾನಲ್ ಮಾಡಲಾಗಿದ್ದು, ನೀರಿನ ಮಟ್ಟವನ್ನು ಸಾಕಷ್ಟು ತಡೆಯಲಾಗಿದೆ.

* ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ನಲ್ಲಿ ನಿಂತಿರುವ ನೀರುನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.

* ಲೇಔಟ್ ನಿಂತಿರುವ ನೀರನ್ನು ಪಂಪ್ ಮೂಲಕ ತೆರವುಗೊಳಿಸಲಾಗುತ್ತಿದೆ.

ಸಮಸ್ಯೆಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ:

ಮಳೆಯಾಗುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆ ವರ್ಚುವಲ್ ಮೂಲಕ ಸಭೆ ನಡೆಸಿ, ಆಯಾ ವಲಯ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸ್ಥಳದಲ್ಲಾಗಿರುವ ಸಮಸ್ಯೆ ಬಗ್ಗೆ ಅವಲೋಕಿಸಿ ಆ ಸ್ಥಳದಲ್ಲಿ ಶಾಶ್ವತ ಪರಿಹಾರ ಹುಡುಕಿ, ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಲು ಸೂಚನೆ ನೀಡಿದರು.

ಮಳೆ ಸಂಬಂಧಿತ ಸಮಸ್ಯೆಗಳ ನಿವಾರಣೆಗಾಗಿ ಪಾಲಿಕೆ ಸಹಾಯವಾಣಿ ಸಂಖ್ಯೆ 1533ಗೆ ಕರೆ ಮಾಡಿ:

ಬೆಂಗಳೂರು ನಗರದಲ್ಲಿ ಮಳೆಯಿಂದಾಗಿ ಏನಾದರೂ ಸಮಸ್ಯೆಗಳು ಉಂಟಾದಲ್ಲಿ ನಾಗರಿಕರು ಕೂಡಲೇ ಬಿಬಿಎಂಪಿ ಸಹಾಯವಾಣಿ 1533 ಗೆ ಕರೆ ಮಾಡಿ ದೂರು ನೀಡಬಹುದು. ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ.

ಕಾವೇರಿ 5ನೇ ಹಂತದ ಯೋಜನೆ ಮಾಡಿದ್ದು ನಾವು, ಡಿಕೆಶಿ ಜಂಭ ಕೊಚ್ಚಿಕೊಳ್ತಿದ್ದಾರೆ: ಆರ್.ಅಶೋಕ್

SHOCKING NEWS: ‘ಸ್ನ್ಯಾಪ್ ಚಾಟ್ ಪಾಸ್ವರ್ಡ್’ ನೀಡಲು ನಿರಾಕರಿಸಿದ ಗರ್ಲ್ ಫ್ರೆಂಡ್: ಇರಿದುಕೊಂಡು ಆತ್ಮಹತ್ಯೆಗೆ ವ್ಯಕ್ತಿ ಯತ್ನ

Share. Facebook Twitter LinkedIn WhatsApp Email

Related Posts

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM1 Min Read
Recent News

ಭಾರತ ತೈಲ ಖರೀದಿ ಪುನರ್ವಿಮರ್ಶಿಸುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲ : ರಷ್ಯಾದ ವಿದೇಶಾಂಗ ಸಚಿವ

04/02/2026 8:12 PM

BREAKING : ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಟಿಟಿಪಿ ದಾಳಿ, ಕ್ಯಾಪ್ಟನ್ ಸೇರಿದಂತೆ 3 ಸಾವು

04/02/2026 8:04 PM

‘ಯಾವುದೇ ಸಮಸ್ಯೆ ಪತ್ತೆಯಾಗಿಲ್ಲ’ : ಬೋಯಿಂಗ್ 787 ಫ್ಲೀಟ್’ನ ಇಂಧನ ನಿಯಂತ್ರಣ ಸ್ವಿಚ್ ಮರು ಪರಿಶೀಲನೆ ಬಳಿಕ ಏರ್ ಇಂಡಿಯಾ ಸ್ಪಷ್ಟನೆ

04/02/2026 7:54 PM

ಕರ್ನಾಟಕವನ್ನು ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಗದ್ಗದಿತ!

04/02/2026 7:46 PM
State News
KARNATAKA

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

By kannadanewsnow0504/02/2026 7:28 PM KARNATAKA 1 Min Read

ಬಳ್ಳಾರಿ : ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ…

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

ವಸಂತ್ ನಾಯಕ ಹತ್ಯೆ ಪ್ರಕರಣ : ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಆರೋಪಿಗಳಿಗೆ 8 ದಿನ ನ್ಯಾಯಾಂಗ ಬಂಧನ

04/02/2026 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.