ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ ( Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರು ನಾಳೆ ಬೆಂಗಳೂರು ಚಲೋ ( Bengaluru Cholo ) ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ಆಸ್ಪತ್ರೆಗಳ ( Government Hospital ) ಆರೋಗ್ಯ ಸೇವೆಯಲ್ಲಿ ( Health Service ) ವ್ಯತ್ಯಯ ಉಂಟಾಗಲಿದೆ.

ಹೌದು.. ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ ( Karnataka Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿಲ್ಲ. ಮೌಲ್ಯಮಾಪನದಂತ ಪದ್ಧತಿಯನ್ನು ರದ್ದುಗೊಳಿಸಬೇಕು. ಶ್ರೀನಿವಾಸಾಚಾರಿ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂಬುದಾಗಿ ಒತ್ತಾಯಿಸಿ ಜುಲೈ.7ರ ನಾಳೆ ಬೆಂಗಳೂರು ಚಲೋ ( Bengaluru Chalo ) ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರೆಲ್ಲರೂ ಭಾಗವಹಿಸುವಂತೆ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಾಮೋಜಿ ಹೇಳಿದ್ದಾರೆ.

BIGG NEWS : ಚಾಮುಂಡಿ ಬೆಟ್ಟದ ʻ ರೋಪ್ ವೇಗೆ ಬ್ರೇಕ್‌ ʼ : ಸಚಿವ ಎಸ್‌.ಟಿ ಸೋಮಶೇಖರ್‌ ಸ್ಪಷ್ಟನೆ

ಈ ಬಗ್ಗೆ ನಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ನೀಡಿದಂತ ಅವರು, ಮೂರು ತಿಂಗಳ ಮೌಲ್ಯಮಾಪವನ್ನು ರಾಜ್ಯ ಸರ್ಕಾರ ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ನಮ್ಮ ಎಲ್ಲಾ ಬೇಡಿಕೆಗಳ ಸಂಬಂಧ ಮಾನ್ಯ ಆರೋಗ್ಯ ಸಚಿವರೊಂದಿಗೆ ಸಂಪೂರ್ಣ ಚರ್ಚೆ ನಡೆಸಲಾಗಿದೆ. ಆ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ, ಸರ್ಕಾರ ಆದೇಶ ಹೊರಡಿಸಬೇಕು ಎಂದರು.

ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಬೆಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ನಗರ ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ. ಜಿಲ್ಲಾ, ತಾಲೂಕು, ಗ್ರಾಮೀಣ ಭಾಗದಿಂದಲೂ ಗುತ್ತಿಗೆ, ಹೊರಗುತ್ತಿಗೆಯ ಸಾವಿರಾರು ನೌಕರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ಬೇಡಿಕೆ ಈಡೇರಿಸೋವರೆಗೆ ಪ್ರತಿಭಟನೆ ಮುಂದುವರೆಯಲಿದೆ. ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಹೇಳಿದರು.

BIGG NEWS : ಶಾಸಕ ಜಮೀರ್ ಅಹ್ಮದ್ ಖಾನ್ ಮನೆ `ACB’ ದಾಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಅಂದಹಾಗೇ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಸಾವಿರಾರು ನೌಕರರು ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅನೇಕರಿಗೆ ನೀಡುತ್ತಿರೋ ವೇತನ ಕಡಿಮೆಯಾಗಿದೆ. ಸರ್ಕಾರಿ ನೌಕರರಿಗೆ ಹೋಲಿಕೆ ಮಾಡಿದ್ರೇ ಅರ್ಧಕ್ಕರ್ಧ ಕಡಿಮೆಯೇ ಆಗಿದೆ. ಶೇ.15ರಷ್ಟು ವೇತನ ಹೆಚ್ಚಳ ಮಾಡೋ ಬಗ್ಗೆ ಆರೋಗ್ಯ ಸಚಿವರೊಂದಿಗೆ ಸಂಘ ಅನೇಕ ಬಾರಿ ಸಭೆ ನಡೆಸಿ ಚರ್ಚಿಸಿದೆ. ಜಾರಿಗೊಳಿಸಲಾಗುತ್ತದೆ ಎಂದು ಹೇಳಿದೆಯೇ ವಿನಹ, ವೇತನ ಹೆಚ್ಚಳದ ಆದೇಶವನ್ನೇ ಮಾಡಿಲ್ಲ. ಇದಲ್ಲದೇ ವರ್ಗಾವಣೆಯೂ ಇಲ್ಲ. ಒಂದು ಬಾರಿಗೆ ಮಾತ್ರವೇ ಜಿಲ್ಲಾ ಹಂತದಲ್ಲಿ ಮಾತ್ರವೇ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಅದರ ಹೊರತಾಗಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶವೇ ಇಲ್ಲ.

ಇನ್ನೂ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರೋ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯವಿಲ್ಲ. ಶ್ರೀನಿವಾಸಾಚಾರಿ ನೇತೃತ್ವದ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವಂತ ವರದಿಯಲ್ಲಿ ಈ ಎಲ್ಲಾ ಸೌಲಭ್ಯವನ್ನು ಕಲ್ಪಿಸುವಂತೆ ಶಿಫಾರಸ್ಸು ಮಾಡಿದೆ. ಈ ವರದಿ ಸಲ್ಲಿಕೆಯಾಗಿ ಎರಡು ವರ್ಷಗಳೇ ಕಳೆದರು ಸರ್ಕಾರ ಮಾತ್ರ ಆ ವರದಿಯ ಅಂಶಗಳನ್ನು ಜಾರಿಗೊಳಿಸೋ ಗೋಜಿಗೆ ಹೋಗಿಲ್ಲ. ದಿನೇ ದಿನೇ ಗಗನಕ್ಕೆ ಏರುತ್ತಿರುವಂತ ಅಗತ್ಯ ವಸ್ತುಗಳ ಬೆಲೆ, ತೈಲದರಗಳ ನಡುವೆಯೂ ಜಮಾನದ ವೇತನದಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರು ಜೀವನ ನಿರ್ವಹಣೆ ಹೇಗೆ ಎಂಬುದು ಅನೇಕರ ಮಾತಾಗಿದೆ. ಈ ಕೆಲ ಬೇಡಿಕೆ ಸೇರಿದಂತೆ ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜುಲೈ 7, 2022ರ ನಾಳೆ ಬೆಂಗಳೂರು ಚಲೋ ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವರದಿ : ಲೀಲಾವತಿ ವಸಂತ ಬಿ ಈಶ್ವರಗೆರೆ

BIGG NEWS : ಕಾಂಗ್ರೆಸ್ ನಾಯಕರಿಗೆ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

Share.
Exit mobile version