ಬೆಂಗಳೂರು : ಬೆಂಗಳೂರು ಮಹಾನಗರಕ್ಕೆ ಕಾವೇರಿ ನೀರು ಪೂರೈಕೆಯಾಗುವ ತಾತಗುಣಿ ಜಲಚೇರಕ ಯಂತ್ರಗಾರ(ಪಂಪಿಂಗ್ ಹೌಸ್)ದಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದಿಂದ ಆ.1ರಂದು(ಇಂದು) ಕಾವೇರಿ 5ನೇ ಹಂತದ ಯೋಜನೆ ಅಡಿ ನೀರು ಸರಬರಾಗುವ ಪ್ರದೇಶಗಳಲ್ಲಿ ನೀರು ವ್ಯತ್ಯಯ ಉಂಟಾಗಲಿದೆ.
ಮಂಡಳಿಯ ತಂಡದಿಂದ ತಾಂತ್ರಿಕ ದೋಷ ಸರಿಪಡಿಸುವ ಕೆಲಸ ನಡೆಯುತ್ತಿದೆ. ಬೆಂಗಳೂರು ದಕ್ಷಿಣ,ಬೆಂಗಳೂರು ಪೂರ್ವ ಸೇರಿದಂತೆ ಕಾವೇರಿ 5ನೇ ಹಂತದ ನೀರು ಸರಬರಾಜಾಗುವ ಪ್ರದೇಶಗಳಲ್ಲಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು,ಇದಕ್ಕೆ ಜಲಮಂಡಳಿ ವಿಷಾದ ವ್ಯಕ್ತಪಡಿಸಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.