ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಮಹದೇವಪುರದಲ್ಲಿ ನಿರ್ವಣ ಸ್ಪ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಿಯಾನಂದ ಪ್ರತಿಕ್ರಿಯೆ ನೀಡಿ ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಕುರಿತಂತೆ ಮಾತನಾಡಿದ ಅವರು, ಮಾದೇವಪುರದ ನಿರ್ವಾಣ ಸ್ಪಾ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 40 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದರು.
33 ಭಾರತೀಯರು ಹಾಗೂ 7 ಜನ ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಸಿಸಿಬಿ ದಾಳಿಯಲ್ಲಿ 47 ಗ್ರಾಹಕರು ಸಿಗಿಬಿದ್ದಿದ್ದಾರೆ.23 ಜನ ಕೆಲಸಗಾರರನ್ನು ಈಗಾಗಲೇ ವಿಚಾರಣೆ ಮಾಡಲಾಗಿದೆ. ಸ್ಪ ಮಾಲಿಕ ಅನಿಲ್ ರೆಡ್ಡಿ ಬಂಧಿಸಿ 5.18 ಲಕ್ಷ ಜಪ್ತಿ ಮಾಡಿದ್ದೇವೆ ಎಂದು ಹೇಳಿದರು.
ಪ್ರಕರಣ ಕುರಿತಂತೆ ಮಾರತಹಳ್ಳಿ ಎಸಿಪಿ ಪ್ರದರ್ಶಿನಿ ನೇತೃತ್ವದಲ್ಲಿ ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ. ಅಲ್ಲದೆ ಇದರಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಭಾಗಿಯಾದ ಆರೋಪ ಕೂಡ ಕೇಳಿಬಂದಿದೆ.ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀ.ದಯಾನಂದ್ ತಿಳಿಸಿದರು.