ಬೆಂಗಳೂರು: ಕೊರೊನಾದಿಂದ ಎರಡು ವರ್ಷಗಳ ಕಾಲ ಹೊಸ ವರ್ಷಾಚರಣೆಗೆ ನಡೆದಿರಲಿಲ್ಲ. ಆದರೆ ಈ ಬಾರಿ ಅದ್ಧೂರಿಯಾಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
BIGG NEWS : ನರೇಗಾ ಯೋಜನೆಯಡಿ `ಗರ್ಭಿಣಿ, ಬಾಣಂತಿ’ಯರಿಗೆ ಶೇ. 50 ರಷ್ಟು ಕೆಲಸ ರಿಯಾಯಿತಿ : ರಾಜ್ಯ ಸರ್ಕಾರ ಆದೇಶ
ಹೀಗಾಗಿ ಬೆಂಗಳೂರಿನ ಎಲ್ಲ ಹೋಟೆಲ್ನವರು ಹೊಸ ವರ್ಷಾಚರಣೆಗೆ ಯನ್ನು ಜೋರಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಹೊಟೇಲ್ಗಳಲ್ಲಿ ಸಿಸಿಕ್ಯಾಮರಾ ಅಳವಡಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕ್ರಿಮಿನಲ್ ಹಿನ್ನೆಲೆಯುಳ್ಳವರು ಬಂದಾಗ ಗಮನ ಹರಿಸುವಂತೆ ಹೊಟೇಲ್ ಮಾಲಿಕರಿಗೆ ಸೂಚನೆ ನೀಡಿದ್ದೇನೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
BIGG NEWS : ನರೇಗಾ ಯೋಜನೆಯಡಿ `ಗರ್ಭಿಣಿ, ಬಾಣಂತಿ’ಯರಿಗೆ ಶೇ. 50 ರಷ್ಟು ಕೆಲಸ ರಿಯಾಯಿತಿ : ರಾಜ್ಯ ಸರ್ಕಾರ ಆದೇಶ
ನಗರದಲ್ಲಿ ಮಾತನಾಡಿದ ಅವರು, ಡಿ.31ರಂದು ಹೊಸ ವರ್ಷಾಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಸುರಕ್ಷತಾ ಕ್ರಮಗಳ ಬಗ್ಗೆ ಹೋಟೆಲ್ನವರಿಗೆ ಮಾರ್ಗದರ್ಶನ ಮಾಡಿದ್ದೇವೆ. ಹೋಟೆಲ್ನವರು ನಮಗೆ ಕೆಲವು ಸಲಹೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ವಾಹನ ಸಂಚಾರ ನಿರ್ವಹಣೆ ಬಗ್ಗೆಯೂ ಪ್ಲ್ಯಾನ್ ಮಾಡಿಕೊಂಡಿದ್ದೇವೆ. ಜನದಟ್ಟಣೆ ನಿರ್ವಹಣೆ, ವಿದ್ಯುತ್ ಸಮಸ್ಯೆ ಬಗ್ಗೆ ಗಮನ ಹರಿಸಲು ಸೂಚಿಸಿದ್ದೇವೆ ಎಂದರು.