Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM

ವಿಶ್ವದ ಅತಿ ಹೆಚ್ಚು ಟ್ರ್ಯಾಕ್ ಮಾಡಲ್ಪಟ್ಟ ವಿಮಾನವಾಗಿ ಮೋದಿ ಪಯಣದ ‘ಏರ್ ಇಂಡಿಯಾ ಒನ್’! ಯಾಕಿಷ್ಟು ಕುತೂಹಲ?

26/02/2026 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿ ವೇಳೆ ನಗರ ಸಂಚಾರ: ಡಿಕೆಶಿ
KARNATAKA

ಬೆಂಗಳೂರಲ್ಲಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿ ವೇಳೆ ನಗರ ಸಂಚಾರ: ಡಿಕೆಶಿ

By kannadanewsnow0921/09/2024 2:38 PM

ಬೆಂಗಳೂರು : “ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ಹೇಳಿದರು.

“ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು.

ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ

“ನಾನು ಬೇರೆ ರಾಜ್ಯಗಳಿಗೆಲ್ಲಾ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಯ ವಿಡಿಯೋಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ಪರಿವರ್ತನೆ ಮಾಡಬೇಕು ಎಂದು ಕೆಲಸ ಮಾಡಿದ್ದಾರೆ. ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ” ಎಂದರು.

ಆರ್. ಅಶೋಕ್ ಮೇಲಿನ ಸಂಚು ಕೇಳಿ ದಿಗ್ಬ್ರಮೆ

ಶಾಸಕ ಮುನಿರತ್ನ ಪ್ರಕರಣಗಳ ವಿಚಾರವಾಗಿ ಎಸ್ ಐಟಿ ರಚನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಅನೇಕರು ಒತ್ತಡ ಹಾಕುತ್ತಿದ್ದಾರೆ. ನೀವು ಇದರ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ “ನನಗೆ ಸಿಎಂ ಭೇಟಿ ಸಾಧ್ಯವಾಗಿಲ್ಲ. ಆದರೆ ಆರ್. ಅಶೋಕ್ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದ್ದೇನೆ. ಈ ರೀತಿಯ ಸಂಚನ್ನು ನಾನು ಇಡೀ ಪ್ರಪಂಚದಲ್ಲಿಯೇ ಕೇಳಿಲ್ಲ” ಎಂದರು.

“ಮುನಿರತ್ನ ವಿಚಾರವಾಗಿ ಅಶೋಕ್ ಅವರು ಮೊದಲು ಮಾತನಾಡಿದ್ದನ್ನು ಕೇಳಿದ್ದೆ. ಈಗ ಮಾತನಾಡಿದ್ದನ್ನು ನಾನು ನೋಡಿಲ್ಲ. ಅಶೋಕಣ್ಣ, ಸಿ.ಟಿ. ರವಿಯಣ್ಣ, ವಿಜಯೇಂದ್ರಣ್ಣ ಅವರುಗಳು ಮಾತನಾಡಬೇಕು. ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯಗಳನ್ನು ಹೇಳಬೇಕು. ಮುಖ್ಯವಾಗಿ ಕುಮಾರಣ್ಣ, ಡಾ. ಮಂಜುನಾಥ್ ಅವರು ಮಾತನಾಡಬೇಕು. ಯಾರು, ಯಾರಿಗೆ ಏನಾಗಿದೆ ಎಂದು ನಾನು ತಿಳಿದುಕೊಳ್ಳಲು ಆಗಿಲ್ಲ. ಜೆಟ್ ಲ್ಯಾಗ್ ಇರುವ ಕಾರಣಕ್ಕೆ ಮಾಧ್ಯಮಗಳನ್ನು ಸರಿಯಾಗಿ ಗಮನಿಸಲು ಆಗಿಲ್ಲ” ಎಂದರು.

ಡಿ.ಕೆ.ಸಹೋದರರ ನೇರ ಷಡ್ಯಂತ್ರ ಎಂದು ವಿಜಯೇಂದ್ರ, ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ “ಅವರುಗಳು ನನ್ನ ನೆನೆಸಿ ಕೊಳ್ಳುತ್ತೀರಬೇಕು” ಎಂದರು.

ಇಷ್ಟೊಂದು ಆರೋಪಗಳು ಇದ್ದರೂ ಬಿಜೆಪಿ ನಾಯಕರು ಬೆಂಬಲ ನೀಡುತ್ತಿರುವ ಬಗ್ಗೆ ಕೇಳಿದಾಗ “ಬಿಜೆಪಿಯವರ ಸಮರ್ಥನೆ ನಮ್ಮ ರಾಜ್ಯದ ಜನತೆಗೆ ಅರ್ಥವಾಗಬೇಕು” ಎಂದು ಹೇಳಿದರು.

ಕುಮಾರಸ್ವಾಮಿ ಅವರ ಗಂಗೇನಹಳ್ಳಿ ಡಿನೋಟಿಫಿಕೇಟಿನ್ ಪ್ರಕರಣದ ದಾಖಲೆ ಬಿಡುಗಡೆ ಮಾಡಲಾಗಿದ್ದು, ಮುಂದಿನ ರಾಜಕೀಯ ಹೋರಾಟ ಹೇಗಿರಲಿದೆ ಎಂದು ಕೇಳಿದಾಗ “ಇದರ ಬಗ್ಗೆ ಸಂಪೂರ್ಣ ವಿಚಾರ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ” ಎಂದರು.

KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಬರೋಬ್ಬರಿ 6.21 ಲಕ್ಷ ದಂಡ ವಸೂಲಿ

ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM1 Min Read

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM2 Mins Read

SHOCKING : ಕೋತಿ ಅಡ್ಡ ಬಂತೆಂದು ಸಡನ್ ಬ್ರೇಕ್ ಹಾಕಿದಕ್ಕೆ ಆಟೋ ಪಲ್ಟಿ : ಕಾರು ಡಿಕ್ಕಿಯಾಗಿ ಚಾಲಕ ಸಾವು!

26/02/2026 12:29 PM1 Min Read
Recent News

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM

ವಿಶ್ವದ ಅತಿ ಹೆಚ್ಚು ಟ್ರ್ಯಾಕ್ ಮಾಡಲ್ಪಟ್ಟ ವಿಮಾನವಾಗಿ ಮೋದಿ ಪಯಣದ ‘ಏರ್ ಇಂಡಿಯಾ ಒನ್’! ಯಾಕಿಷ್ಟು ಕುತೂಹಲ?

26/02/2026 12:31 PM

SHOCKING : ಕೋತಿ ಅಡ್ಡ ಬಂತೆಂದು ಸಡನ್ ಬ್ರೇಕ್ ಹಾಕಿದಕ್ಕೆ ಆಟೋ ಪಲ್ಟಿ : ಕಾರು ಡಿಕ್ಕಿಯಾಗಿ ಚಾಲಕ ಸಾವು!

26/02/2026 12:29 PM
State News
KARNATAKA

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

By kannadanewsnow0526/02/2026 12:41 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.…

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM

SHOCKING : ಕೋತಿ ಅಡ್ಡ ಬಂತೆಂದು ಸಡನ್ ಬ್ರೇಕ್ ಹಾಕಿದಕ್ಕೆ ಆಟೋ ಪಲ್ಟಿ : ಕಾರು ಡಿಕ್ಕಿಯಾಗಿ ಚಾಲಕ ಸಾವು!

26/02/2026 12:29 PM

ಕಾಂಗ್ರೆಸ್ ಪಕ್ಷದ 140 ಶಾಸಕರು ಕೂಡ ‘ಸಿಎಂ’ ಆಗಲು ಅರ್ಹರೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

26/02/2026 12:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.