ಬೆಂಗಳೂರು: ನಗರದಲ್ಲಿ ವ್ಯಕ್ತಿಯೊಬ್ಬರು ಗಾಲಿಕುರ್ಚಿಯಲ್ಲಿ ಕುಳಿತು ರಸ್ತೆಯಲ್ಲಿ ಸಂಚರಿಸುತ್ತಿದ್ದವರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಒಬ್ಬರು ಬಂದ ದಾರಿಯಲ್ಲೇ ಹಿಂದಿರುಗುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
BIGG NEWS: ಕೊಡಗಿನಲ್ಲಿ ಭಾರಿ ಮಳೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸದ ವೇಳೆ ಬೆಂಗಳೂರಿಗೆ ಆಗಮಿಸಿದ್ದರು. ಆಗ ಅವರು ಸಾಗುವ ಆ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಇದು ಅವರು ಸಾಗುವ ಮೊದಲು ನಡೆದಿರುವ ವಿದ್ಯಮಾನ ಎಂದು ವರದಿಯಾಗಿದೆ.ಸೋಷಿಯಲ್ ಮೀಡಿಯಾದಲ್ಲಿ ಹುಟ್ಟಿಕೊಂಡಿರುವ ಚರ್ಚೆಗಳ ಗಮನಸೆಳೆದಿದೆ. ಅಲ್ಲಿ ಈ ವೀಡಿಯೊ ವಿವಿಐಪಿ ಸಂಸ್ಕೃತಿಯ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.
VVIP culture !
A man in wheelchair asked to return by traffic police because Amit Shah convoy is going to pass by that road.
Bengaluru, Karnataka.pic.twitter.com/S7C4ktwGTl
— Shantanu (@shaandelhite) August 4, 2022
ಒಬ್ಬ ಟ್ವಿಟರ್ ಬಳಕೆದಾರ ವೀಡಿಯೊವನ್ನು ಪೋಸ್ಟ್ ಮಾಡಿದ್ದು, “ವಿವಿಐಪಿ ಸಂಸ್ಕೃತಿ! ಗಾಲಿಕುರ್ಚಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಟ್ರಾಫಿಕ್ ಪೊಲೀಸ್ ಬಂದ ದಾರಿಯಲ್ಲೇ ಹಿಂದಿರುಗುವಂತೆ ಸೂಚಿಸಿದರು. ಯಾಕೆ ಎಂದು ಆತ ಕೇಳಿದಾಗ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಬೆಂಗಾವಲು ಪಡೆ ಇದೇ ರಸ್ತೆಯಲ್ಲಿ ಹೋಗುತ್ತದೆ. ಬೆಂಗಳೂರು, ಕರ್ನಾಟಕ” ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.