ಬೆಂಗಳೂರು : ಬೆಂಗಳೂರಲ್ಲಿ ಇತ್ತೀಚಿಗೆ ಕೊಲೆ ಪ್ರಕರಣಗಳ ಸಂಖ್ಯೆ ದಿನದಿಂದ ಗೆದ್ದನಕ್ಕೆ ಹೆಚ್ಚುತ್ತಿದ್ದು, ಇಂದು ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಇಲ್ಲಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಲೂರು ಸಮೀಪದ ಬಿಡಿಎ ಪಾರ್ಕ್ ಬಳಿ ಶುಕ್ರವಾರ ವರದಿಯಾಗಿದೆ.
ಶಿವಾಜಿನಗರದ ನಿವಾಸಿ ಸತೀಶ್ ಕುಮಾರ್(32) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊರಿಯರ್ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಸತೀಶ್‌ಕುಮಾರ್ ನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹಲಸೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.