ಬೆಂಗಳೂರು: ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಜೂನ್ 1ಕ್ಕೆ ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಬೆಂಗಳೂರು ಕೋರ್ಟ್ ಸೂಚನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ್ದ ಆರೋಪ ಪ್ರಶ್ನಿಸಿ ದಾಖಲಾಗಿರುವ ಕೇಸ್‌ನಲ್ಲಿ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ಜೂ.1 ರಂದು ಖುದ್ದು ಹಾಜರಾಗುವಂತೆ ಸೂಚನೆಯನ್ನು ನೀಡಲಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿಅಪಪ್ರಚಾರ ಮಾಡಿದ್ದಾರೆಂದು ಬಿಜೆಪಿ, ಕಾಂಗ್ರೆಸ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಿತ್ತು. ಆ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಪ್ರಕರಣದ ಪ್ರತಿವಾದಿಗಳಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ಗೆ ಮಾ.28ಕ್ಕೆ ಖುದ್ದು ಹಾಜರಾಗಲು ಸಮನ್ಸ್ ಜಾರಿ ಮಾಡಿದೆ.