ಬೆಂಗಳೂರು : ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವನ್ನಪ್ಪಿದ್ದು ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಈ ಒಂದು ಘಟನೆ, ಬೆಂಗಳೂರಿನ ಕೋಣನಕುಂಟೆಯಲ್ ಕ್ರಾಸ್ ಬಳಿರುವ ಅಸ್ಟ್ರಾ ಆಸ್ಪತ್ರೆಯಲ್ಲಿ ನಡೆದಿದೆ.
ಅಸ್ಟ್ರಾ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವನಪ್ಪಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕೋಣನಕುಂಟೆ ಕ್ರಾಸ್ ನಲ್ಲಿರುವ ಅಸ್ಟ್ರಾ ಆಸ್ಪತ್ರೆಯಲ್ಲಿ ನಿನ್ನೆ ಮಂಡ್ಯ ಮೂಲದ ತನು (23) ಎನ್ನುವ ಮಹಿಳೆ ದಾಖಲಾಗಿದ್ದರು.ಈ ವೇಳೆ ಆಸ್ಪತ್ರೆಯ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆಯಾದ ಕೆಲವೇ ಗಂಟೆಯಲ್ಲಿ ತನುವ ಮೃತಪಟ್ಟಿದ್ದಾರೆ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ವೈದರ ನಿರ್ಲಕ್ಷಕ್ಕೆ ಬಾಣಂತಿ ಸಾವನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.