ಬೆಂಗಳೂರು: ನಗರದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಲ್ಲಿ ಅಪಾರ್ಮೆಂಟ್ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯ(19) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದಂತ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗುತ್ತಿದೆ. ಈ ಹಿಂದೆಯೂ ಆತ್ಮಹತ್ಯೆಗೆ ಡೆಂಟಲ್ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲ ಬಾರಿಗೆ ಭಾರತ ನಡೆಸಿದ ಲೇಸರ್ ಆಧಾರಿತ ಶಸ್ತ್ರಾಸ್ತ್ರ ಪರೀಕ್ಷೆ ಯಶಸ್ವಿ | Laser-Based Weapon
BIG BREAKING: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಹತ್ಯೆ ಕೇಸ್: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ