ಬೆಂಗಳೂರು: ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದತೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆಯನ್ನು ನೀಡಿ NIA ವಿಶೇಷ ಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಇಂದು ಎನ್ ಐ ಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎ14 ಸೈಯದ್ ಇಕ್ರಮುದ್ದೀನ್ ಆಲಿಯಾಸ್ ನವೀದ್, ಎ16 ಸೈಯದ್ ಆಸಿಫ್, ಎ18 ಮೊಹಮ್ಮದ್ ಆತೀಫ್ ಗೆ 7 ವರ್ಷ ಕಠಿಣ ಶಿಕ್ಷೆಯನ್ನು ವಿಧಿಸಲಾಗಿದೆ.
ಇನ್ನೂ ಇದಲ್ಲದೇ ಮೂವರು ಆರೋಪಿಗಳಿಗೆ ತಲಾ 46 ಸಾವಿರ ದಂಡವನ್ನು ವಿಧಿಸಿ ಎನ್ಐಎ ವಿಶೇಷ ಕೋರ್ಟ್ ಆದೇಶಿಸಿದೆ. ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧಿತರಾಗಿದ್ದಂತ ಅಪರಾಧಿಗಳು ಇವರಾಗಿದ್ದಾರೆ.
ಗಲಭೆ ನಡೆಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪವಿತ್ತು. ಎನ್ಐಎ ಪರ ಎಸ್ ಪಿಪಿ ಪಿ.ಪ್ರಸನ್ನ ಕುಮಾರ್ ವಾದಿಸಿದ್ದರು.
BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ