ಬೆಂಗಳೂರು : ನಿನ್ನೆ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಅಣ್ಣ-ತಂಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಮೃತ ಬಾಲಕ ಮತ್ತು ಬಾಲಕಿಯ ತಾಯಿ ನಾಗಮ್ಮಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈಗಾಗಲೇ ಈ ಕುರಿತು ಎಸ್ ಟಿ ಸೋಮಶೇಖರ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲದೆ ಬಿಬಿಎಂಪಿ ಹಾಗೂ ಅವರಿಂದ ಸೇರಿ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತೆ.ಪರಿಹಾರ ನೀಡುವ ಸಂಬಂಧ ಸೋಮಶೇಖರ ಜೊತೆಗೆ ಮಾತನಾಡಿದ್ದೇನೆ. ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಅವರ ಜೊತೆಗೆ ಈ ಕುರಿತು ಮಾತನಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಕೆಂಗೇರಿ ಬೆಂಗಳೂರಿನ ಯಶವಂತಪುರ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತದೆ ನಾಗಮ್ಮ ಪುತ್ರಿ ಮಹಾಲಕ್ಷ್ಮಿ ಹಾಗೂ ಪುತ್ರ ಜಾನ್ ಸೀನ ಇಬ್ಬರು ಮೃತಪಟ್ಟಿದ್ದರು. ನಿನ್ನೆ ಬೆಳಗ್ಗೆ ಆಕಸ್ಮಿಕವಾಗಿ ಮಹಾಲಕ್ಷ್ಮಿ ಕೆರೆಗೆ ಬಿದ್ದಿದ್ದಳು. ಈ ವೇಳೆ ತಂಗಿಯ ರಕ್ಷಣೆಗೆ ಕೆರೆಗೆ ಇಳಿದಿದ್ದ ಅಣ್ಣ ಜಾನ್ ಸೆನಾ ಕೂಡ ಸಾವನ್ನಪ್ಪಿದ್ದ. ಇದೀಗ ತಾಯಿ ನಾಗಮ್ಮಗೆ ಡಿಸಿಎಂ ಡಿಕೆ ಶಿವಕುಮಾರ್ ಪರಿಹಾರ ಘೋಷಿಸಿದ್ದಾರೆ.