ಬೆಂಗಳೂರು : ಬೆಂಗಳೂರಿನಿಂದ ಕೊಯಮತ್ತೂರಿಗೆ ಖಾಸಗಿ ಬಸ್ ನಲ್ಲಿ ಸುಮಾರು 30.50 ಲಕ್ಷ ನಗದು ಹಾಗೂ 500 ಗ್ರಾಂ ಚಿನ್ನವನ್ನು ಅಕ್ರಮವಾಗಿ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿ ಇದೀಗ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ಜೂಜುವಾಡಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಜೂಜುವಾಡಿ ಎಂಬಲ್ಲಿ ಖಾಸಗಿ ಬಸ್ ನಲ್ಲಿ ಬೆಂಗಳೂರಿನಿಂದ ಕೊಯಮತ್ತೂರಿಗೆ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ರಾಜಕುಮಾರ್ ಎನ್ನುವ ವ್ಯಕ್ತಿಯನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ಹಣ ಸಾಗಿಸುತ್ತಿದ್ದ ರಾಜಕುಮಾರ್ ಎಂದು ಹೇಳಲಾಗುತ್ತಿದ್ದು, ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದಾಗ 30.50 ಲಕ್ಷ ನಗದು 500 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.