ಬೆಂಗಳೂರು: ಡಿ.13: ನಗರದ ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ವಲಯ ಆಯುಕ್ತರುಗಳ ಹಾಗೂ ವಲಯ ಜಂಟಿ ಆಯುಕ್ತರ ನಿರ್ದೇಶನದ ಮೇರೆಗೆ ಇಂದು ವಿವಿಧ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ನಾಗರೀಕರ ಓಡಾಟಕ್ಕೆ ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.ಪಾದಚಾರಿ ಮಾರ್ಗದಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಅಕ್ರಮವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆಯಿಂದ ನಿರಂತರವಾಗಿ ನಡೆಸಲಾಗುತ್ತಿದೆ.
ಇಂದು ಪಾಲಿಕೆ ದಕ್ಷಿಣ ವಲಯದ ಚೋಳರಪಾಳ್ಯ ವ್ಯಾಪ್ತಿಯಲ್ಲಿನ ಮಾಗಡಿ ಮುಖ್ಯರಸ್ತೆ ಹಾಗೂ ಬೊಮ್ಮನಹಳ್ಳಿ ವಲಯದ ಜಂಬೂ ಸವಾರಿ ದಿಣ್ಣೆ ಮುಖ್ಯರಸ್ತೆಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ.ಪಾದಚಾರಿ ಮಾರ್ಗಗಳಲ್ಲಿ ಹಾಕಲಾಗಿದ್ದ ಜಾಹೀರಾತು ಫಲಕಗಳು, ಬೆಂಚುಗಳು, ಶಾಶ್ವತ ಪೆಟ್ಟಿಗೆಗಳನ್ನು ತೆರವುಗೊಳಿಸಿ ಪಾದಚಾರಿಗಳ ಓಡಾಟಕ್ಕೆ ಸುಗಮಗೊಳಿಸಲಾಯಿತು. ತೆರವುಗೊಳಿಸಿದ ವಸ್ತುಗಳನ್ನು ಪಾಲಿಕೆ ವಶಕ್ಕೆ ಪಡೆದು ಮತ್ತೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡದಂತೆ ಕಟ್ಟೆಚ್ಚರಿಕೆಗಳನ್ನು ನೀಡಲಾಯಿತು.
ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಹೂಳು ತೆರವು ಕಾರ್ಯ
ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಸಂತಪುರ ವಾರ್ಡ್ ವ್ಯಾಪ್ತಿಯಲ್ಲಿ ಪಿ.ಎನ್.ಬಿ. ಬಡಾವಣೆ ಹಾಗೂ ವಿಠ್ಠಲ ನಗರ ಬಡಾವಣೆಗಳ ಚರಂಡಿಗಳು ಹೂಳಿಂದ ಮುಚ್ಚಿಹೋಗಿದ್ದು, ಮಳೆ ನೀರು ಸರಾಗವಾಗಿ ಹರಿಯಲು ಚರಂಡಿಗಳಲ್ಲಿ ತುಂಬಿದ್ದ ಹೂಳನ್ನು ತೆರವುಗೊಳಿಸಲಾಗಿದೆ.ತೆರವು ಕಾರ್ಯಾಚರಣೆಯ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.