ಬೆಂಗಳೂರು : ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹನುಮಂತ ನಗರದ ಪಿಜಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಆದಿತ್ಯಾ ಸಿಂಗ್ (19) ಎಂದು ತಿಳಿದುಬಂದಿದೆ. ಆದಿತ್ಯ ಸಿಂಗ್ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 1st ಸೆಮಿಸ್ಟರ್ ಒದುತ್ತಿದ್ದನು. ಈತ ಮೂಲತಃ ಉತ್ತರಪ್ರದೇಶ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದನು. ಆದರೆ, ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇನ್ನು ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲಿಯೇ ಹನುಮಂತನರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಪಿಜಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಮೃತದೇಹದ ಪೋಸ್ಟ್ ಮಾರ್ಟಂ ಬಳಿಕ ಪೋಷಕರಿಗೆ ಶವ ಹಸ್ತಾಂತರಿಸಲಾಗಿದೆ
2ನೇ ಪ್ರಕರಣ
ಕಳೆದ ತಿಂಗಳು ಅಂದರೆ ಜ.18ರಂದು ಇದೇ ಬಿಎಂಎಸ್ ಕಾಲೇಜಿನ ಬಹುಮಹಡಿ ಕಟ್ಟಡದಿಂದ ಜಿಗಿದು ಅಕ್ಷಯ್ ರೆಡ್ಡಿ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿದ್ದನು.ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿರಲಿಲ್ಲ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್‌ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಒಂದೇ ತಿಂಗಳ ಅಂತರದಲ್ಲಿ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈತನ ಸಾವಿಗೂ ಕಾರಣ ತಿಳಿದುಬಂದಿಲ್ಲ.