ಬೆಂಗಳೂರು : ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಯುವಕನೊಬ್ಬ ನಾಪತ್ತೆಯಾಗಿದ್ದು, ಆರೋಪಿ ಯುವಕನ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಪ್ರದೇಶದ ಕಡಪ ಮೂಲದ ಯುವಕ ಕ್ರೆಡಿಟ್ ಕಾರ್ಡ್ ಮಾಡಿಸಲು ಬ್ಯಾಂಕ್ ವೊಂದಕ್ಕೆ ಹೋಗಿದ್ದ ವೇಳೆ ಕಸ್ಟಮರ್ ಕೇರ್ ಆಗಿದ್ದ ಯುವತಿ ಜೊತೆ ಸ್ನೇಹ ಬೆಳೆಸಿ ಹೊಟೇಲ್ವೊಂದಕ್ಕೆ ಕರೆಸಿಕೊಂಡು ಜ್ಯೂಸ್ ನಲ್ಲಿ ಮತ್ತು ಬರುವ ಡ್ರಗ್ಸ್ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಾಪತ್ತೆಯಾಗಿದ್ದಾನೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಲಕ್ಷ್ಮೀ ರೆಡ್ಡಿ ಎನ್ನಲಾಗಿದೆ.
ಸದ್ಯ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಲಕ್ಷ್ಮೀ ರೆಡ್ಡಿ ವಿಡಿಯೋ ತೋರಿಸಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಲಕ್ಷ್ಮೀ ರೆಡ್ಡಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.