ಬೆಂಗಳೂರು: ನಗರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿತ್ತು. ಈ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇಂದು ಅವರ ಅಮಾನತುರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇಂದು ರಾಜ್ಯ ಸರ್ಕಾರದಿಂದ ಅಮಾನತು ರದ್ದು ಆದೇಶ ಹಾಗೂ ಸ್ಥಳ ನಿಯೋಜನೆ ಆದೇಶವನ್ನು ಹೊರಡಿಸಲಾಗಿದೆ. ಅದರಲ್ಲಿ ಪ್ರಸ್ತಾವನೆಯಲ್ಲಿ ವಿವರಿಸಿದ ಸಂಗತಿಗಳು ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು, ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969 ರ ನಿಯಮ- 3(7) (ಸಿ) ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ವಿಕಾಶ್ ಕುಮಾರ್ ವಿಕಾಶ್, ಐಪಿಎಸ್ (ಕೆಎನ್: 2004) ರ ಅಮಾನತು ಆದೇಶವನ್ನು ಈ ಮೂಲಕ ರದ್ದುಗೊಳಿಸುತ್ತದೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969 ರ ನಿಯಮ 8 ರ ಅಡಿಯಲ್ಲಿ ಶಿಸ್ತು ಕ್ರಮಗಳನ್ನು ಪ್ರಾರಂಭಿಸುವವರೆಗೆ, ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಗೆ ಮರಳಲು ಆದೇಶಿಸಲಾಗಿದೆ.
ಇದಲ್ಲದೆ ವಿಕಾಶ್ ಕುಮಾರ್ ವಿಕಾಶ್, ಐಪಿಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿ ಖಾಲಿ ಹುದ್ದೆಯಲ್ಲಿ ನೇಮಿಸಲಾಗಿದೆ.
ಮಂಡ್ಯದಲ್ಲಿ ತಾವರೆ ಹೂವು ಕೊಯ್ಯಲು ಕೆರೆಗೆ ಇಳಿದ ವ್ಯಕ್ತಿ ನಾಪತ್ತೆ: ನೀರಲ್ಲಿ ಮುಳುಗಿ ಸಾವಿನ ಶಂಕೆ
BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು