ಬೆಂಗಳೂರು : ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿ ರೂ.ಗೆ ಹೆಚ್ಚು ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ವರ್ತೂರು ಪ್ರಕಾಶ್ ಸೇರಿದಂತೆ ಹಲವು ಗಣ್ಯರ ಹೆಸರು ಬಳಸಿಕೊಂಡು ಚಿನ್ನ ಖರೀದಿಸಿ ಕೋಟ್ಯಾಂತರ ರೂ. ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಕೇಶಿ ನಗರದ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಶ್ವೇತಾಗೌಡ ನವರತ್ನ ಜ್ಯುವೆಲರ್ಸ್ ಮಳಿಗೆಯಲ್ಲಿ ಖರೀದಿಸಿದ್ದ 2.945 ಕೆಜಿ ಚಿನ್ನವನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ಮನೆಗೆ, ಅಂಗಡಿ ಸಿಬ್ಬಂದಿ ತಲುಪಿಸಿದ್ದರು. ಶ್ವೇತಾ ಮಾಜಿ ಸಚಿವರ ಮನೆ ವಿಳಾಸವನ್ನೇ ಕೊಟ್ಟಿದ್ದಳು. ಸದ್ಯ ವರ್ತೂರು ಪ್ರಕಾಶ್ ಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.