ಬೆಂಗಳೂರು : ಬಿಸಿಲಿನಿಂದ ಬಸವಳಿದಿದ್ದ ಬೆಂಗಳೂರಿನ ಜನತೆಗೆ ವರುಣ ಕೃಪೆ ತೋರಿದ್ದು ಇದೀಗ ನಗರದ ಹಲವೆಡೆ ಬಿರುಗಾಳಿ ಸಮೇತ ಮಳೆ ಶುರುವಾಗಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇದೀಗ ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸೇರಿ ಹಲವೆಡೆ ಮಳೆರಾಯ ಆರ್ಭಟಿಸಿದ್ದಾನೆ.
ಬೆಂಗಳೂರು ನಗರದ ಆನೇಕಲ್ ತಾಲೂಕಿನ, ಚಂದಾಪುರ, ವಣಕನಹಳ್ಳಿ, ಸೋಲೂರು ಗೋಮ್ಮಾಳಪುರ ಭಾಗದಲ್ಲಿ ಆಲಿಕಲ್ಲು ಮಳೆಯಾಗಿದೆ.ಅದೇ ರೀತಿಯಾಗಿ ಮುಂದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.