ಬೆಂಗಳೂರು: ಇ-ಖಾತಾ ಸಮಸ್ಯೆ ನಿವಾರಣೆಗೆ ಸಂಬಂಧಿಸಿದಂತೆ ಬಿಬಿಎಂಪಿಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಇ-ಖಾತಾ ಪಡೆಯವು ಬಗ್ಗೆ ವೀಡಿಯೋ ಕೂಡ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವ್ಯವಸ್ಥೆ:
ನಗರದಲ್ಲಿ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ದಾಖಲೆಗಳನ್ನು ತೆಗದುಕೊಂಡು ಹೋಗಿ 45 ರೂ. ಪಾವತಿಸಿದರೆ ಇ-ಖಾತಾ ಸಿಗಲಿದೆ.
ಇ-ಖಾತಾ ಪಡೆಯುವ ವೀಡಿಯೋ ಬಿಡುಗಡೆ:
ನಾಗರೀಕರು ಇ-ಖಾತಾ ಪಡೆಯಲು ಅರ್ಜಿ ಹಾಕುವ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಸಲುವಾಗಿ ಪಾಲಿಕೆಯ ಯುಟ್ಯೂಬ್ ಲಿಂಕ್ https://youtube.com/@bbmpcares?si=YStwr7xLhX5aRxFT ನಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯ ವೀಡಿಯೋ ಅಪ್ಲೊಡ್ ಮಾಡಲಾಗಿದೆ. ಈ ವೀಡಿಯೋ ನೋಡಿಕೊಂಡು ಸುಲಭವಾಗಿ ಇ-ಖಾತಾ ಪಡೆಯಬಹುದಾಗಿದೆ. ಇದೇ ರೀತಿ ಇನ್ನಿತರೆ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಲಿದ್ದು, ಪಾಲಿಕೆಯ ಯೂಟ್ಯೂಬ್ ಚಾನಲ್ ಅನ್ನು Subscribe ಮಾಡಿಕೊಳ್ಳಲು ನಾಗರೀಕರಲ್ಲಿ ಕೋರಿದೆ.
ವಲಯವಾರು ಇ-ಖಾತಾ ಸಹಾಯವಾಣಿ ಸಂಖ್ಯೆಯ ವಿವರಗಳು:
ಇ-ಖಾತಾ ಪಡೆಯಲು ತಾಂತ್ರಿಕ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ವಲಯವಾರು 13 ಸಹಾಯ ತಂಡಗಳನ್ನು ರಚಿಸಲಾಗಿದೆ. ಸದರಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅನಗತ್ಯವಾಗಿ ಕರೆ ಮಾಡದಿರಲು ವಿನಂತಿಸಿದೆ.
ವಲಯ – ಸಹಾಯವಾಣಿ ಸಂಖ್ಯೆ
1. ಬೊಮ್ಮನಹಳ್ಳಿ ವಲಯ: 9480683182 / 9480683712
2. ದಾಸರಹಾಳ್ಳಿ ವಲಯ: 9480683710
3. ಮಹಾದೇವಪುರ ವಲಯ: 9480683718 / 9480683720
4. ಪೂರ್ವ ವಲಯ: 9480683203
5. ಪಶ್ಚಿಮ ವಲಯ: 9480683653 / 9480683204
6. ದಕ್ಷಿಣ ವಲಯ: 9480683638 / 9480683179
7. ರಾಜರಾಜೇಶ್ವರಿ ನಗರ ವಲಯ: 9480683576
8. ಯಲಹಂಕ ವಲಯ: 9480683645 / 9480683516
ಜಸ್ಟೀಸ್ ಮೈಕಲ್ ಕುನ್ಹಾ ಅವರ ವೈಯಕ್ತಿಕ ನಿಂದನೆಗೆ ಖಂಡನೆ: ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು
ಸಿಎಂ, ಡಿಸಿಎಂ ವಿರುದ್ಧ ಕುಮಾರಸ್ವಾಮಿ, ದೇವೇಗೌಡರು ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ: ಚಲುವರಾಯಸ್ವಾಮಿ