ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಉತ್ತನಹಳ್ಳಿಯಲ್ಲಿ ನಡೆದಿದ್ದು, ಮೃತ ಮಹಿಳೆ ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಎಂದು ಗುರುತಿಸಲಾಗಿದೆ.
ಹೌದು ಮೃತ ದುರ್ಗಮ್ಮ ಹಾಗೂ ಮಾರುತಿ 2 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದರು. ನಂತರ ಎರಡು ಕುಟುಂಬಗಳು ಇದನ್ನು ಒಪ್ಪಿಕೊಂಡು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ, ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡ್ತಿದ್ದರು.
ಆದರೆ ಮದುವೆಯಾದ ಬಳಿಕ ಮಾರುತಿ ಹೆಂಡತಿಯ ಮೇಲೆ ಅನುಮಾನ ಪಡೋಕೆ ಶುರು ಮಾಡಿದ್ದಾನೇ ನಂತರ ದಿನವೂ ಹೆಂಡತಿಯ ಮೇಲೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.ಕಳೆದ ಒಂದು ತಿಂಗಳ ಹಿಂದೆಯೂ ಗಲಾಟೆ ಮಾಡಿಕೊಂಡು ಮೃತ ಮಹಿಳೆ ದುರ್ಗಮ್ಮ ಊರಿಗೆ ಹೋಗಿದ್ದಳು.
ಬಳಿಕ 15 ದಿನಗಳ ಹಿಂದೆ ಪತ್ನಿಯ ಮನವೊಲಿಸಿ ಗಂಡ ಮಾರುತಿ ಬೆಂಗಳೂರಿಗೆ ಕರೆತಂದಿದ್ದ. ಆದರೆ ಬಂದ 15 ದಿನದಲ್ಲೆ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪಿದ್ದು ಗಂಡನಿಂದಲೆ ಕೊಲೆ ಆರೋಪ ಕೇಳಿಬಂದಿದೆ.ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 6 ತಿಂಗಳ ಮಗು ಇದೀಗ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದೆ.