ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿ ( Silicon City ) ಜನತೆ ತತ್ತರಿಸಿ ಹೋಗಿದ್ದಾರೆ. ಅನೇಕ ಕಡೆಗಳಲ್ಲಿ ಜಲಾವೃತದ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿರುವಾಗಲೇ ಮುಂದಿನ ಮೂರು ತಿಂಗಳು ಬೆಂಗಳೂರಿನಲ್ಲಿ ಮಳೆಯಾಗಲಿದೆ ( Bengaluru Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ತಜ್ಞ ಪ್ರಸಾದ್ ಅವರು, ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ, ನವೆಂಬರ್ ವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
VIRAL NEWS: ಬೆಕ್ಕನ್ನು ಹುಲಿ ಮಾಡಿದ ಭೂಪ: ಮುಂದೆ ಪೋಲಿಸರಿಗೆ ಸಿಕ್ಕಿದ್ದೇ ರೋಚಕ
ಬೆಂಗಳೂರಿನಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅದರಲ್ಲೂ ಸೆಪ್ಟೆಂಬರ್ 1ರಿಂದ ಇಲ್ಲಿಯವರೆಗೆ 211 ಮಿ ಮೀಟರ್ ಮಳೆಯಾಗಿದೆ. ಈ ಪರಿಣಾಮದಿಂದಲೇ ರಾಜ್ಯ ರಾಜಧಾನಿಯಲ್ಲಿ ಜಲಾವೃತಗೊಳ್ಳೋದಕ್ಕೆ ಕಾರಣ ಎಂದಿದ್ದಾರೆ.
ಇನ್ನೂ ಕರಾವಳಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿರುವ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿಯೂ ಮುಂದಿನ ಮೂರು ದಿನ ಭಾರಿ ಮಳೆಯ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಚಿಕ್ಕಮಗಳೂರು, ಕೊಡಗು, ಕೋಲಾರ, ಹಾಸನ, ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ. ಮೂರು ದಿನಗಳ ಬಳಿಕ ಮಳೆಯ ಪ್ರಾಮಾಣದಲ್ಲಿ ಕೊಂಚ ಇಳಿಕೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.