Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು: ಗಣರಾಜ್ಯೋತ್ಸವ ಹಿನ್ನಲೆ, ಈ ಮಾರ್ಗಗಳಲ್ಲಿ ‘ಬದಲಾವಣೆ’
KARNATAKA

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನಲೆ, ಈ ಮಾರ್ಗಗಳಲ್ಲಿ ‘ಬದಲಾವಣೆ’

By kannadanewsnow0724/01/2024 10:57 AM

ಬೆಂಗಳೂರು:  ದಿನಾಂಕ:26/01/2024 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ-2024ರ ಅಂಗವಾಗಿ ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿ ಎಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲಿನ ರಸ್ತೆಗಳಲ್ಲಿ ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ
ಕೋರಲಾಗಿದೆ.
2. ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಸಿ.ಆರ್.ಟಿ., ಬಿ.ಬಿ.ಎಂ.ಪಿ, ಹಾಗೂ ಪಿ.ಡಬ್ಲ್ಯೂ.ಡಿ, ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 3 ರ ಮೂಲಕ ಒಳಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
4. ದಿನಾಂಕ:26/01/2024 ರಂದು ಬೆಳಗ್ಗೆ 08-30 ಗಂಟೆಯಿಂದ ಬೆಳಗ್ಗೆ 10-30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ ಫೆಂಟ್ರಿ ರಸ್ತೆ – ಸಫೀನಾ ಪ್ಲಾಜಾ ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಭಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್‌ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.ಅನಿಲ್‌ ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
5. ಭದ್ರತಾ ದೃಷ್ಠಿಯಿಂದ ಪೆರೇಡ್‌ಗೆ ಬರುವ ಎಲ್ಲಾ ಆಹ್ವಾನಿತರು ಮೊಬೈಲ್ ಫೋನ್, ಹೆಲೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08-00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.
ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:
1. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ 2. ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
ವಿಶೇಷ ಮನವಿ
1. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು
ಸಂಪರ್ಕಿಸಿ, ಅಥವಾ 112 ಗೆ ಕರೆಮಾಡಿ.
2. ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ.

 

Bengaluru: In the wake of Republic Day changes in these routes there is a 'change' in these routes ಈ ಮಾರ್ಗಗಳಲ್ಲಿ 'ಬದಲಾವಣೆ' ಬೆಂಗಳೂರು: ಗಣರಾಜ್ಯೋತ್ಸವ ಹಿನ್ನಲೆ
Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.