ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತೆ ಆಗಿದೆ. ಇತ್ತೀಚಿಗೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ನಡೆದಿದೆ.
ನಿನ್ನೆ ರಾತ್ರಿ ರಾತ್ರಿ 10.30 ರ ವೇಳೆಗೆ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.
ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.