ಬೆಂಗಳೂರು : ಇನ್ನು ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರು ಏನಾಗುತ್ತೆ ನೀರಿನ ಅಭಾವ ಎದುರಿಸುತ್ತಿದ್ದು ಪ್ರತಿನಿತ್ಯ ನೀರಿಗಾಗಿ ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಬೆಂಗಳೂರಿನ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ನೀವು ಮೊಬೈಲ್ ನಲ್ಲಿ ರೀಲ್ಸ್ಗಳನ್ನು ನೋಡುತ್ತಿದ್ದೀರಾ? ಇದು ನಿಮ್ಮ ಆರೋಗ್ಯ ಮತ್ತು ಭವಿಷ್ಯಕ್ಕೆ ಅಪಾಯಕಾರಿಯಂತೆ!
ಈ ಕುರಿತಂತೆ ಸಮಾಜಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ.
ಈ ಸಂಬಂಧ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾರ್ಚ್ 7ರ ಒಳಗಾಗಿ bbmp.oasisweb.in/TankerManageme… ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
BREAKING: ಛತ್ತೀಸ್ಗಢದ ಕಂಕೇರ್ನಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ!
ಈ ವಿಚಾರವಾಗಿ ಮಾರ್ಚ್ 4ರಂದು ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಆಯುಕ್ತರು, ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಬಿಬಿಎಂಪಿ ಜೋನಲ್ ಕಮಿಷನರ್ಗಳು, ಜಂಟಿ ಆಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ.
ನೀರು ಪೂರೈಸುವ ಟ್ಯಾಂಕರ್ ಗಳು ಸಾರ್ವಜನಿಕರಿಂದ ಮಿತಿ ಮೀರಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ಸಹಾಯವಾಗುವ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ. ಈ ಸಂಬಂಧ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು…
— DK Shivakumar (@DKShivakumar) March 2, 2024