ಬೆಂಗಳೂರು: ನಗರದಲ್ಲಿ ಯುವತಿಯರ ಖಾಸಗಿ ಅಂಗ ಮುಟ್ಟಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಪರಾರಿಯಾದ ಘಟನೆ ಸಂಬಂಧ ಕೈಗೊಂಡ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗ ಪೊಲೀಸ್ ಇಲಾಖೆಗೆ ಪತ್ರ ಬರೆದಿದೆ.
ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಡಿಸಿಪಿ ಸಾರಾ ಫಾತಿಮಾಗೆ ಪತ್ರ ಬರೆದಿದ್ದು, ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಯುವತಿಯರ ಖಾಸಗಿ ಅಂಗವನ್ನು ಮುಟ್ಟಿ ಯುವಕ ಅಸಭ್ಯವಾಗಿ ವರ್ತಿಸಿದಂತ ಘಟನೆ ಸಂಬಂಧ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ.
ಇನ್ನೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಯುವಕ ಪತ್ತೆ, ಬಂಧನ ಸಂಬಂಧ ತನಿಖಾ ವರದಿಯನ್ನು ಸಲ್ಲಿಸುವಂತೆ ಡಿಸಿಪಿಗೆ ರಾಜ್ಯ ಮಹಿಳಾ ಆಯೋಗವು ಪತ್ರದಲ್ಲಿ ತಿಳಿಸಿದೆ.
ಅಂದಹಾಗೇ ಏಪ್ರಿಲ್.3ರಂದು ಮಧ್ಯರಾತ್ರಿ ಸುದ್ದಗುಂಟೆಪಾಳ್ಯದಲ್ಲಿ ಇಬ್ಬರು ಯುವತಿಯರ ಖಾಸಗಿ ಅಂಗಗಳನ್ನು ಮುಟ್ಟಿ ಯುವಕನೊಬ್ಬ ಅನುಚಿತ ವರ್ತನೆ ತೋರಿದ್ದನು. ಈ ಸಂಬಂಧ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ