ಬೆಂಗಳೂರು : ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲಿನ ಕಹಿ ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರು ನೆಲದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿನ ನಗೆಬೀರಿತ್ತು.

ಇದೀಗ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸವಾರಿ ಮಾಡಲು ಸಜ್ಜಾಗಿದೆ ಹೀಗಾಗಿ ಬೆಂಗಳೂರಿನ ಹಲವು ಮಾರ್ಗಗಳು ಬದಲಾವಣೆಯಾಗಲಿದ್ದು ಅಲ್ಲದೆ ಕೆಲವು ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ನಿಷೇಧಿಸಲಾಗಿದೆ.

ನಾಳೆಯ ಪಂದ್ಯಾವಳಿಗೆ ಸಾಕಷ್ಟು ಜನರು ಸೇರುವ ಹಿನ್ನಲೆ ಮಧ್ಯಾಹ್ನ 3 ಘಂಟೆ ಯಿಂದ ರಾತ್ರಿ 11 ವರೆಗೆ ಸುಗಮ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧವಿದ್ದರೆ, ಬೇರೆಡೆ ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳನ್ನು ನಿಗದಿ ಮಾಡಲಾಗಿದೆ.

ಯಾವ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ?

ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧಿಸಲಾಗಿದೆ.

ವಾಹನಗಳ ಪಾರ್ಕಿಂಗ್ ವ್ಯವಸ್ಥೆ

ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್​​
ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ), ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್​​ಗಳು ಪಿಕ್ ಆಪ್ ಮತ್ತು ಡ್ರಾಪ್​ ಮಾಡುವ ಸ್ಥಳ ನಿಗದಿ ಮಾಡಲಾಗಿದೆ.

ಅಲ್ಲದೆ ನಾಳೆ ಸಿಲಿಕಾನ್ ಸಿಟಿಯಲ್ಲಿ ಈ ಪಂದ್ಯ ನಡೆಯಲಿದ್ದು ಹೀಗಾಗಿ ಕ್ರೀಡಾಂಗಣದ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದಾರೆ. ಪೊಲೀಸರ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ದುಪ್ಪಟ್ಟು ಭದ್ರತೆ ಕಲ್ಪಿಸಲಾಗಿದೆ.

Share.
Exit mobile version