ಬೆಂಗಳೂರು: ನಗರದ ಕೋರಮಂಗಲದಲ್ಲಿದ್ದಂತ ಪಿಜಿಯಲ್ಲಿ ಯುವತಿಯೊಬ್ಬಳನ್ನು ವಿಕೃತ ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಇರಿದು ಕೊಂದಿದ್ದನು. ಕೃತ್ಯವೆಸಗಿ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಕೋರಮಂಗಲದಲ್ಲಿನ ಪಿಜಿಯಲ್ಲಿ ಕೃತಿ ಕುಮಾರಿ ಎಂಬ ಯುವತಿಯನ್ನು ಪ್ರಿಯಕರ ಅಭಿಷೇಕ್ ಎಂಬಾತ, ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು. ಈ ಕೃತ್ಯ ಪಿಜಿಯಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹತ್ಯೆಯ ಬಳಿಕ ಆರೋಪಿ ಅಭಿಷೇಕ್ ಮಧ್ಯಪ್ರದೇಶದ ರಾಯ್ ಸನ್ ಎಂಬಲ್ಲಿಗೆ ಪರಾರಿಯಾಗಿದ್ದನು.
ಪ್ರಕರಣ ದಾಖಲಿಸಿಕೊಂಡಿದ್ದಂತ ಕೋರಮಂಗಲ ಠಾಣೆಯ ಪೊಲೀಸರು ಮಧ್ಯಪ್ರದೇಶಕ್ಕೆ ತೆರಳಿ, ಆರೋಪಿ ಅಭಿಷೇಕ್ ಎಂಬಾತನನ್ನು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಬೆಂಗಳೂರಿನ 41ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಅಲ್ಲದೇ ಕೋರ್ಟ್ ಗೆ ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದಂತ ನ್ಯಾಯಾಲಯವು, ಆರೋಪಿ ಅಭಿಷೇಕ್ ನನ್ನು 10 ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಂತ ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು, ಕೋರಮಂಗಲದ ಪಿಜಿಯಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿಯನ್ನು ಮಧ್ಯಪ್ರದೇಶದ ರಾಯ್ ಸನ್ ಜಿಲ್ಲೆಯಲ್ಲಿ ಬಂಧಿಸಲಾಗಿತ್ತು. ಕೋರ್ಟ್ ಗೆ ಹಾಜರುಪಡಿಸಿ, ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ತನಿಖೆ ನಡೆಯುತ್ತಿರುವ ಕಾರಣ ಏನು ಹೇಳಲು ಆಗುವುದಿಲ್ಲ. ಆರೋಪಿ ಬಂಧಿಸಿ ಮುಂದಿನ ತನಿಖೆ ಮಾಡುತ್ತಿದ್ದೇವೆ ಅಂತ ತಿಳಿಸಿದ್ದಾರೆ.
ಬೆಂಗಳೂರಿನ ‘ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್’ಗಳಿಗೆ BBMPಯಿಂದ ಹೊಸ ರೂಲ್ಸ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್
ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ