ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿನ್ನೆ, ಮೊನ್ನೆ ಮಳೆಯಾಗಿತ್ತು. ಈಗ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ್ದು, ಮೇ.7 ಮತ್ತು 8ರ ಬಳಿಕ ಬೆಂಗಳೂರಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದಿದೆ.
ಬೆಂಗಳೂರಲ್ಲಿ ಮುಂದಿನ ಮೂರು ದಿನ ಉಷ್ಣಾಂಶವು ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ದಾಖಲಾಗೋ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ ಸೇರಿ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದಿದೆ.
ಮೇ 7ರ ಬಳಿಕ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.