ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1 ರಿಂದ 6ರ ವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ಜೂನ್ 6 ರಂದು ವಿಧಾನ ಪರಿಷತ್ ಚುನಾವಣೆ ಮತ ಏಣಿಕೆ ನಡೆಯಲಿದೆ. ಹೀಗಾಗಿ ಜೂನ್ 1 ರಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಜೂನ್ 1 ರಿಂದ ಜೂನ್ 6ರ ವರೆಗೆ ಬಾರ್, ವೈನ್ ಶಾಪ್, ರೆಸ್ಟೋರೆಂಟ್,ಕ್ಲಬ್, ಹೊಟೆಲ್, ಅಂಗಡಿಗಳಲ್ಲಿ ಮದ್ಯ ಮಾರಾಟ, ಶೇಖರಣೆ ನಿಷೇಧಿಸಲಾಗಿದೆ.ಜೂನ್ 3ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಚುನಾವಣೆಗೂ 48 ಗಂಟೆ ಮನ್ನ ಅಂದರೆ ಜೂನ್ 1ರಿಂದಲೇ ಮದ್ಯ ಮಾರಾಟ ನಿಷೇಧಗೊಳ್ಳಲಿದೆ.
ಇನ್ನು ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಕಾರಣದಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ ರಾತ್ರಿ 12 ಗಂಟೆ ವರೆದೆ ಮದ್ಯ ಮಾರಾಟ ನಿಷೇಧಗೊಳ್ಳಲಿದೆ.ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಜೊತೆಗೆ ಲೋಕಸಭಾ ಚುನಾವಣೆ ಫಲಿತಾಂಶವೂ ಪ್ರಕಟಗೊಳ್ಳಲಿದೆ. ಹೀಗಾಗಿ ಒಟ್ಟು 5 ದಿನಗಳ ಕಾಲ ಮದ್ಯ ನಿಷೇಧ ಮಾಡಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.