ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪರಾರಿಯಾಗಿದ್ದ ದ್ವಿಚಕ್ರ ವಾಹನ ಸವಾರನನ್ನು ಬಸವನಗುಡಿ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಬಸವನಗುಡಿ ವೇಣು(25) ಬಂಧಿತ ದ್ವಿಚಕ್ರ ವಾಹನ ಸವಾರ. ಫೆ.12ರಂದು ಮುಂಜಾನೆ 2.45ರ ಸಮಾರಿಗೆ ಹನು ಮಂತನಗರದ 1ನೇ ಮುಖ್ಯ ರಸ್ತೆ ಗವಿ ಪುರ ಎಕ್ಸ್ಟೆನ್ಸನ್ ಅಂಚೆ ಕಚೇರಿ ಬಳಿ ಆಟೋರಿಕ್ಷಾಗೆ ದ್ವಿಚಕ್ರ ವಾಹನ ಡಿಕ್ಕಿ ಯಾಗಿತ್ತು.
ಈ ವೇಳೆ ಆಟೋ ಚಾಲಕ ರಮೇಶ್ (48) ಮೇಲೆ ಆಟೋರಿಕ್ಷಾ ಬಿದ್ದು ಗಂಭೀರವಾಗಿ ಗಾಯಗೊಂಡಿ ದ್ದರು. ಬಳಿಕ ಸ್ಥಳೀಯರು ಗಾಯಾಳು ಆಟೋ ಚಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವ ವಾಗಿದ್ದ ಪರಿಣಾಮ ಚಿಕಿತ್ಸೆ ಫಲಿಸದೆ ರಮೇಶ್ ಮೃತಪಟ್ಟಿದ್ದರು.
ಅಪಘಾತ ಎಸಗಿದ ದ್ವಿಚಕ್ರ ವಾಹನ ಸವಾರ ವೇಣು ಘಟನೆ ಬಳಿಕ ದ್ವಿಚಕ್ರ ವಾಹನ ಸಹಿತ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಬಸವನಗುಡಿ ಸಂಚಾರ ಠಾಣೆ ಪೊಲೀಸರಿಗೆ ಅಪಘಾತ ಎಸಗಿದ ದ್ವಿಚಕ್ರ ವಾಹನ ಮತ್ತು ಅದರ ಸವಾರನ ಬಗ್ಗೆ ಮಾಹಿತಿ ಇರಲಿಲ್ಲ. ಬಳಿಕ ಘಟನಾ ಸ್ಥಳದ ಸುತ್ತಮುತ್ತಲ ಸುಮಾರು 70ಕ್ಕೂ ಅಧಿಕ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸಿ ದಾಗ ಒಂದು ಸಿಸಿಟಿವಿ ಕ್ಯಾಮೆರಾದಲ್ಲಿ ದ್ವಿಚಕ್ರ ವಾಹನ ಸವಾರನ ಸುಳಿವು ಸಿಕ್ಕಿದೆ.