ಬೆಂಗಳೂರು: ನಗರದಲ್ಲಿ ಹೊಸ ವರ್ಷದಂದೇ ಬೆಚ್ಚಿ ಬೀಳಿಸೋ ಘಟನೆ ನಡೆದಿರುವುದು ಈಗ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನನ್ನೇ ಏರ್ ಪೋನ್ ಗಾಗಿ ಹಲ್ಲೆ ಮಾಡಿ, ಕೊಲೆ ಮಾಡಿರೋ ಘಟನೆ ನಡೆದಿದೆ.
ಬೆಂಗಳೂರಿನ ದೊಡ್ಡನಾಗಮಂಗಲದ ಬಳಿಯಲ್ಲಿ ಡಿಸೆಂಬರ್ 31ರಂದು ಸ್ನೇಹಿತರೆಲ್ಲಾ ಸೇರಿಕೊಂಡು ನ್ಯೂ ಇಯರ್ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಏರ್ ಪೋನ್ ಗಾಗಿ ಉಂಟಾದಂತ ಜಗಳ ತಾರಕ್ಕೇರಿ, ಸ್ನೇಹಿತ ಕಾರ್ತಿಕ್ (27) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ.
ನಾಲ್ವರು ಸ್ನೇಹಿತರಿಂದ ತೀವ್ರವಾಗಿ ಹಲ್ಲೆಗೊಳಗಾದಂತ ಕಾರ್ತಿಕ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.