ಬೆಂಗಳೂರು: ನಗರದಲ್ಲಿ ಪೊಲೀಸ್ ಠಾಣೆಯಲ್ಲೇ ಆರೋಪಿಯೊಬ್ಬ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತ ಅಚ್ಚರಿಯ ಘಟನೆ ನಡೆದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿಯನ್ನು ರವಿ ಆಲಿಯಾಸ್ ರಾಬಿನ್ ಎಂಬುದಾಗಿ ತಿಳಿದು ಬಂದಿದೆ.
ರವಿ ಆಲಿಯಾಸ್ ರಾಬಿನ್ ನನ್ನು ಸರಗಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದರು. ಪೊಲೀಸ್ ವಶದಲ್ಲಿದ್ದಂತ ಆತ ನಿನ್ನೆ ರಾತ್ರಿ ಪೊಲೀಸರು ಹೊಡೆಯುತ್ತಾರೆ ಎಂಬ ಭಯಕ್ಕೆ ಠಾಣೆಯ ಬಾತ್ ರೂಮಿನಲ್ಲೇ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಇನ್ನೂ ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿ ರವಿ ಆಲಿಯಾಸ್ ರಾಬಿನ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!